ಬೆಂಗಳೂರು: ಹಾಸನ ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗ ಕಾಂಗ್ರೆಸ್ ಜೆಡಿಎಸ್ ನಡುವೆ ಫೋಸ್ಟರ್ ವಾರ್ ಶುರುವಾಗಿದೆ. ನಗರದ ಲೂಲು ಮಾಲ್ ಹಾಗೂ ಕೆಪಿಸಿಸಿ ಕಚೇರಿ ಮುಂದೆ ಆಗಂತುಕರು ಪೋಸ್ಟರ್ ಅಂಟಿಸಿದ್ದಾರೆ. ಪೋಸ್ಟರ್ ನಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಮತ್ತು ಸಿಎಂ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ್ದಾರೆ.
ರಾತ್ರೋ ರಾತ್ರಿ ಬೆಂಗಳೂರಿನ ಬೀದಿ ಬೀದಿಗಳಲ್ಲಿ ಡಿಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರನ್ನು ಒಳಗೊಂಡ ಬಿತ್ತಿಪತ್ರಗಳು ಪತ್ತೆಯಾಗಿವೆ. ನಗರದ ಪ್ರಮುಖ ಸ್ಥಳಗಳಲ್ಲಿ ಈ ಫೋಟೋಗಳು ವೈರಲ್ ಆಗಿದೆ. ಈ ನಡುವೆ ದೇವರಾಜೇಗೌಡ ನನ್ನ ವಿರುದ್ಧ ಮಾಡಿರುವ ಆಪಾದನೆಗಳು ಸುಳ್ಳು ಹಾಗೂ ಆಧಾರ ರಹಿತ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ತಿಳಿಸಿದ್ದಾರೆ.