ಮಂಗಳೂರು : ಅತ್ಯಂತ ವೇಗವಾಗಿ ಬಂದಂತಹ ಆಂಬುಲೆನ್ಸ್ ಒಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಕೇರಳ ಮೂಲದ ಮೂವರು ಸ್ಥಳದಲ್ಲೇ ಸಾವನಪ್ಪಿರುವ ಘಟನೆ ಮಂಗಳೂರಲ್ಲಿ ನಡೆದಿದೆ.
ಅಂಬುಲೆನ್ಸ್ ಡಿಕ್ಕಿಯಾಗಿ ಕಾರಿನಲ್ಲಿ ತೆರಳುತ್ತಿದ್ದವರು ಮೂವರು ಇದೀಗ ಸಾವನಪ್ಪಿದ್ದಾರೆ.ಇಬ್ಬರು ಸ್ಥಳದಲ್ಲಿ ಸಾವನ್ನಪ್ಪಿದ್ದರೆ ಒಬ್ಬ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ. ಕಾಸರಗೋಡು ಜಿಲ್ಲೆಯ ಮಂಜೆಶ್ವರ ಬಳಿ ಈ ದುರ್ಘಟನೆ ಸಂಭವಿಸಿದೆ.
ಮೃತಪಟ್ಟವರನ್ನು ಕೇರಳದ ತ್ರಿಶೂರು ಜಿಲ್ಲೆಯ ಗುರುವಾಯುರು ಗ್ರಾಮದವರು ಎಂದು ಹೇಳಲಾಗುತ್ತಿದೆ. ಶ್ರೀನಾಥ್, ಶರತ್ ಮೆನನ್ ಸೇರಿ ಮೂವರು ಸಾವನ್ನಪ್ಪಿದ್ದಾರೆ ಎಂದು ಹೇಳಲಾಗುತ್ತಿದೆ ಅಪಘಾತದ ವೇಳೆ ಆಂಬುಲೆನ್ಸ್ನಲ್ಲಿದ್ದ ರೋಗಿಗೂ ಗಾಯವಾಗಿದೆ. ಘಟನೆ ಕುರಿತಂತೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.