ಬಳ್ಳಾರಿ: ಜಿಲ್ಲೆಯಲ್ಲಿ ಗೌಪ್ಯ ಮತದಾನದ ನಿಯಮ ಉಲ್ಲಂಘಿ ಬಿಜೆಪಿಗೆ ಮತದಾನ ಮಾಡಿದಂತ ಪೋಟೋ ಹಂಚಿಕೊಂಡಂತ ಪಾಲಿಕೆ ಸದಸ್ಯನ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಬಳ್ಳಾರಿ ಮಹಾನಗರ ಪಾಲಿಕೆಯ 10ನೇ ವಾರ್ಡ್ ನ ಬಿಜೆಪಿ ಸದಸ್ಯ ಕೋನಂಕಿ ತಿಲಕ್ ಅವರು ಮತ ಚಲಾಯಿಸುವಾಗ ಇವಿಎಂ ಮಿಷಿನ್ ಮೇಲೆ ಕಮಲದ ಚಿನ್ನೆ ಒತ್ತಿದಂತ ಪೋಟೋ ಕ್ಲಿಕ್ಕಿಸಿಕೊಂಡಿದ್ದರು. ಈ ಪೋಟೋವನ್ನು ವಾಟ್ಸ್ ಆಪ್ ಸ್ಟೇಟಸ್ ಹಾಕಿದ್ದರು.
ಪಾಲಿಕೆ ಸದಸ್ಯ ಲೋಕಸಭಾ ಚುನಾವಣೆಯ ಗೌಪ್ಯ ಮತದಾನದ ನಿಯ ಉಲ್ಲಂಘಿಸಿ ಪೋಟೋ ಕ್ಲಿಕ್ ಮಾಡಿದ್ದರ ಬಗ್ಗೆ ಚುನಾವಣಾ ಆಯೋಗದಿಂದ ದೂರು ನೀಡಲಾಗಿತ್ತು. ಈ ದೂರಿನ ಹಿನ್ನಲೆಯಲ್ಲಿ ಬಳ್ಳಾರಿಯ ಕೌಲ್ ಬಜಾರ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
BREAKING: ಮಾಜಿ ಸಚಿವ ಹೆಚ್.ಡಿ ರೇವಣ್ಣಗೆ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು | HD Revanna
ಯೋಗೀಶ್ ಗೌಡ ಕೊಲೆ ಕೇಸ್ : ಶಾಸಕ ವಿನಯ್ ಕುಲಕರ್ಣಿಗೆ ಮತದಾನಕ್ಕೆ ಅನುಮತಿ ನೀಡಿದ ಹೈಕೋರ್ಟ್