ಬೆಂಗಳೂರು: ಮಹಿಳೆ ಕಿಡ್ನಾಪ್ ಪ್ರಕರಣದಲ್ಲಿ ಎಸ್ಐಟಿ ಅಧಿಕಾರಿಗಳಿಂದ ಬಂಧನಕ್ಕೆ ಒಳಗಾಗಿ, ಅವರ ವಶದಲ್ಲಿರುವಂತ ಮಾಜಿ ಸಚಿವ ಹೆಚ್.ಡಿ ರೇವಣ್ಣ ಆರೋಗ್ಯದಲ್ಲಿ ಏರುಪೇರಾಗಿದೆ. ಹೀಗಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಿರೋದಾಗಿ ತಿಳಿದು ಬಂದಿದೆ.
ಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೋದ ಸಂತ್ರಸ್ತೆಯನ್ನು ಕಿಡ್ನಾಪ್ ಮಾಡಿದಂತ ಪ್ರಕರಣದಲ್ಲಿ ಜೆಡಿಎಸ್ ಶಾಸಕ ಹೆಚ್.ಡಿ ರೇವಣ್ಣ ಅವರನ್ನು ಎಸ್ಐಟಿ ಅಧಿಕಾರಿಗಳು ಬಂಧಿಸಿದ್ದರು. ಕೋರ್ಟ್ ಗೆ ಹಾಜರುಪಡಿಸಿ ಮೇ.8ರವರೆಗೆ ತಮ್ಮ ವಶಕ್ಕೆ ಪಡೆದಿದ್ದಾರೆ.
ಇಂದು ಅವರು ಬೌರಿಂಗ್ ಆಸ್ಪತ್ರೆಗೆ ಕರೆದೊಯ್ದು ವೈದ್ಯಕೀಯ ಪರೀಕ್ಷೆ ಕೂಡ ಮಾಡಿಸಲಾಗಿತ್ತು. ಈ ಬೆನ್ನಲ್ಲೇ ಮಾಜಿ ಸಚಿವ ಹೆಚ್.ಡಿ ರೇವಣ್ಣ ಅವರ ಆರೋಗ್ಯದಲ್ಲಿ ಏರುಪೇರಾಗಿದೆ. ಅವರಿಗೆ ಎದೆನೋವು ಕಾಣಿಸಿಕೊಂಡಿದ್ದು, ಕೂಡಲೇ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂಬುದಾಗಿ ತಿಳಿದು ಬಂದಿದೆ.
ಅಲ್ಲದೇ ಹೊಟ್ಟೆ ಉರಿ ಕೂಡ ಹೆಚ್ಚಾಗಿದ್ದು, ವಿಕ್ಟೋರಿಯಾ ಆಸ್ಪತ್ರೆಯಲ್ಲಿ ವೈದ್ಯರು ಹೆಚ್.ಡಿ ರೇವಣ್ಣ ಅವರಿಗೆ ಚಿಕಿತ್ಸೆ ನೀಡುತ್ತಿರೋದಾಗಿ ತಿಳಿದು ಬಂದಿದೆ.
ಯೋಗೀಶ್ ಗೌಡ ಕೊಲೆ ಕೇಸ್ : ಶಾಸಕ ವಿನಯ್ ಕುಲಕರ್ಣಿಗೆ ಮತದಾನಕ್ಕೆ ಅನುಮತಿ ನೀಡಿದ ಹೈಕೋರ್ಟ್
ಬೆಂಗಳೂರಲ್ಲಿ ಮಳೆಯಿಂದ ತೊಂದ್ರೆ ಆಗದಂತೆ ಕ್ರಮವಹಿಸಿ: ಅಧಿಕಾರಿಗಳಿಗೆ ತುಷಾರ್ ಗಿರಿನಾಥ್ ಸೂಚನೆ