ಮೈಸೂರು : ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ರಾಸಲೀಲೆ ಪೆನ್ ಡ್ರೈವ್ ಅನ್ನು ಚೆನ್ನೈನಲ್ಲಿ ಖರೀದಿಸಿ ಆಸ್ಟ್ರೇಲಿಯಾ, ಮಲೇಷ್ಯಾದಲ್ಲಿ ತಯಾರಿಸಲಾಗಿದೆ ಎಂದು ಜಿ.ಟಿ.ದೇವೇಗೌಡ ಗಂಭೀರ ಆರೋಪ ಮಾಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೆನ್ ಡ್ರೈವ್ ತಯಾರಿಕೆಗೆ ಕೋಟ್ಯಾಂತರ ರೂಪಾಯಿಗಳನ್ನು ಖರ್ಚು ಮಾಡಲಾಗಿದೆ. ಲೋಕಸಭೆ ಚುನಾವಣೆಯಲ್ಲಿ ಹೆಚ್.ಡಿ.ಕುಮಾರಸ್ವಾಮಿ ಅವರು ನಾಮಪತ್ರ ಸಲ್ಲಿಕೆ ದಿನ ಹಣ ವರ್ಗಾವಣೆ ಆಗಿದೆ. ಪೆನ್ ಡ್ರೈವ್ ತಯಾರಿಗೆ ಐದು ಕೋಟಿ ರೂ. ಖರ್ಚು ಮಾಡಲಾಗಿದೆ ಎಂದು ಹೇಳಿದ್ದಾರೆ.
ಪೆನ್ ಡ್ರೈವ್ ಗಳನ್ನು ಚೆನ್ನೈನಲ್ಲಿ ತಯಾರಿಸಲಾಗಿದ್ದು, ಮಲೇಷ್ಯಾ ಹಾಗೂ ಆಸ್ಟ್ರೇಲಿಯಾದಲ್ಲಿ ಪೆನ್ ಡ್ರೈವ್ ತಯಾರಿಸಲಾಗಿದೆ. ಜೆಡಿಎಸ್ ಪಕ್ಷವನ್ನು ಮುಗಿಸಲು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ ಸಂಚು ನಡೆಸಿದ್ದಾರೆ ಎಂದರು.