ಬೆಂಗಳೂರು: ಹಾಸನದ ಸಂಸದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವೀಡಿಯೋಗಳ ಪೆನ್ ಡ್ರೈವ್ ಹಂಚಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ರಾಜ್ಯ ಮಹಿಳಾ ಆಯೋಗಕ್ಕೆ ಜೆಡಿಎಸ್ ಮಹಿಳಾ ಘಟಕದಿಂದ ದೂರು ನೀಡಲಾಗಿದೆ.
ಇಂದು ಜೆಡಿಎಸ್ ಪಕ್ಷದ ಮಹಿಳಾ ಘಟಕದ ಅಧ್ಯಕ್ಷೆ ರಶ್ಮೀ ರಾಮೇಗೌಡ ನೇತೃತ್ವದಲ್ಲಿ ತೆರಳಿದಂತ ಮಹಿಳಾ ಜೆಡಿಎಸ್ ಕಾರ್ಯಕರ್ತರು, ರಾಜ್ಯ ಮಹಿಳಾ ಆಯೋಗದ ಕಚೇರಿಯಲ್ಲಿ ಹಾಸನ ಪೆನ್ ಡ್ರೈವ್ ಅಶ್ಲೀಲ ವೀಡಿಯೋ ಹಂಚಿಕೆ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಮನವಿ ಮಾಡಲಾಗಿದೆ.
ಅಶ್ಲೀಲ ವೀಡಿಯೋಗಳು ದಿನದಿಂದ ದಿನಕ್ಕೇ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿವೆ. ಇದರಿಂದ ಸಂತ್ರಸ್ತ ಮಹಿಳೆಯರ ಗೌರವಕ್ಕೆ ಧಕ್ಕೆ ಉಂಟಾಗಿದೆ. ಈ ವೀಡಿಯೋಗಳನ್ನು ಬೆಂಗಳೂರು, ಮಂಡ್ಯದಲ್ಲಿ ಪೆನ್ ಡ್ರೈವ್ ನಲ್ಲಿ ಹಂಚಲಾಗಿದೆ ಎಂಬುದಾಗಿ ಕೇಳಿ ಬರುತ್ತಿದೆ. ಹೀಗೆ ಹಂಚಿಕೆ ಮಾಡಿದಂತ ಆರೋಪಿಗಳನ್ನು ಬಂಧಿಸಿ, ಕಾನೂನು ಕ್ರಮ ಜರುಗಿಸುವಂತೆ ಮನವಿ ಮಾಡಲಾಗಿದೆ.
ಮೂರನೇ ಹಂತದ ಮತದಾನದ ಬಳಿಕ ಕಾಂಗ್ರೆಸ್-‘ಇಂಡಿಯಾ’ ಮೈತ್ರಿ ಮುರಿದು ಬಿದ್ದಿದೆ: ಪ್ರಧಾನಿ ಮೋದಿ