ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೋ ಪ್ರಕರಣದ ಸಂತ್ರಸ್ತ ಮಹಿಳೆಯನ್ನು ಕಿಡ್ನ್ಯಾಪ್ ಪ್ರಕರಣ ಮಾಜಿ ಸಚಿವ ಹೆಚ್.ಡಿ ರೇವಣ್ಣ ವಿರುದ್ಧ ದಾಖಲಾಗಿತ್ತು. ಈ ಪ್ರಕರಣದಲ್ಲಿ ಮಧ್ಯಂತರ ಜಾಮೀನು ಕೋರಿ ಸಲ್ಲಿಸಲಾಗಿದ್ದಂತ ಅರ್ಜಿಯನ್ನು ಕೋರ್ಟ್ ವಜಾಗೊಳಿಸಿತ್ತು. ಬಳಿಕ ಎಸ್ಐಟಿಯಿಂದ ಹೆಚ್.ಡಿ ರೇವಣ್ಣ ಅವರನ್ನು ಬಂಧಿಸಲಾಗಿತ್ತು. ಕೋರ್ಟ್ ಗೆ ಹಾಜರುಪಡಿಸಿ ಹೆಚ್ಚಿನ ವಿಚಾರಣೆಗಾಗಿ ಇಂದಿನವರೆಗೆ ತಮ್ಮ ವಶಕ್ಕೆ ಎಸ್ಐಟಿ ಅಧಿಕಾರಿಗಳು ಪಡೆದಿದ್ದರು. ಇಂದು ಜಾಮೀನು ಅರ್ಜಿಯ ವಿಚಾರಣೆ ನಡೆಸಿದಂತ ಕೋರ್ಟ್, ನಾಳೆಗೆ ವಿಚಾರಣೆಯನ್ನು ಮುಂದೂಡಿಕೆ ಮಾಡಿದೆ.
ಹಾಸನ ಪೆನ್ ಡ್ರೈವ್ ವೀಡಿಯೋ ಪ್ರಕರಣದಲ್ಲಿ ಸಂತ್ರಸ್ತೆ ಮಹಿಳೆಯನ್ನು ಕಿಡ್ನ್ಯಾಪ್ ಮಾಡಿದ್ದಾರೆ ಎಂಬುದಾಗಿ ಅವರ ಪುತ್ರ ಹೊಳೇನರಸೀಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ದೂರಿನ ಹಿನ್ನಲೆಯಲ್ಲಿ ಮಾಜಿ ಸಚಿವ, ಜೆಡಿಎಸ್ ಶಾಸಕ ಹೆಚ್ ಡಿ ರೇವಣ್ಣ ವಿರುದ್ಧ ಕಿಡ್ನ್ಯಾಪ್ ಕೇಸ್ ದಾಖಲಾಗಿತ್ತು. ಈ ಪ್ರಕರಣದಲ್ಲಿ ಮಧ್ಯಂತರ ಜಾಮೀನು ಕೋರಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.
ಆದ್ರೇ ಈ ಅರ್ಜಿಯನ್ನು ವಜಾಗೊಳಿಸಿತ್ತು. ಮಧ್ಯಂತರ ಜಾಮೀನು ನೀಡೋದಕ್ಕೆ ನಿರಾಕರಿಸಿತ್ತು. ಹೀಗಾಗಿ ಎಸ್ಐಟಿ ಅಧಿಕಾರಿಗಳು ಅವರನ್ನು ಬಂಧಿಸಿದ್ದರು. ಅಲ್ಲದೇ ಮೇ.8ರ ಇಂದಿನವರೆಗೆ ಕೋರ್ಟ್ ಗೆ ಹಾಜರುಪಡಿಸಿ ತಮ್ಮ ವಶಕ್ಕೆ ಪಡೆದಿದ್ದದರು. ಇಂದು ಹೆಚ್.ಡಿ ರೇವಣ್ಣ ಸಲ್ಲಿಸಿದ್ದಂತ ಜಾಮೀನು ಅರ್ಜಿಯ ವಿಚಾರಣೆಯನ್ನು ಕೈಗೆತ್ತಿಕೊಂಡ ನ್ಯಾಯಾಲ ಪೀಠದ ಮುಂದೆ ಎಸ್ಐಟಿ ಪರ ವಕೀಲರು ಸಾಕ್ಷ್ಯನಾಶ ಮಾಡೋ ಅವಕಾಶವಿದೆ. ಅವರಿಗೆ ಜಾಮೀನು ನೀಡದಂತೆ ಮನವಿ ಮಾಡಿದರು. ಈ ವಾದವನ್ನು ಆಲಿಸಿದಂತ ಕೋರ್ಟ್ ಮಾಜಿ ಸಚಿವ ಹೆಚ್.ಡಿ ರೇವಣ್ಣ ಅವರ ಜಾಮೀನು ಅರ್ಜಿಯನ್ನು ನಾಳೆಗೆ ಮುಂದೂಡಿಕೆ ಮಾಡಲಾಗಿದೆ.
‘ಹಾಸನ ಪೆನ್ ಡ್ರೈವ್ ವೀಡಿಯೋ’ ಹಂಚಿದವರ ವಿರುದ್ಧ ಕ್ರಮಕ್ಕಾಗಿ ‘ರಾಜ್ಯ ಮಹಿಳಾ ಆಯೋಗ’ಕ್ಕೆ ‘JDS ದೂರು’