ಹಾಸನ: ಜಿಲ್ಲೆಯಲ್ಲಿ ಕೋಲಾಹಲ ಸೃಷ್ಠಿಸಿದ್ದಂತ ಸಂಸದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವೀಡಿಯೋ ಪ್ರಕರಣದ ಸೂತ್ರಧಾರ ಅವರ ಮಾಜಿ ಕಾರು ಚಾಲಕನಾಗಿದ್ದನು. ಅವರಿಂದ ಪಡೆದಂತ ಪೆನ್ ಡ್ರೈವ್ ವೀಡಿಯೋಗಳು ಹೊರ ಬಂದನಂತ್ರವೇ, ಪ್ರಜ್ವಲ್ ಅಶ್ಲೀವ ವೀಡಿಯೋ ಬೆಳಕಿಗೆ ಬಂದಿದ್ದರು. ಈಗ ಪ್ರಜ್ವಲ್ ಮಾಜಿ ಕಾರು ಚಾಲಕ ಕಾರ್ತಿಕ್ ಸಲ್ಲಿಸಿದ್ದಂತ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಕೋರ್ಟ್ ವಜಾಗೊಳಿಸಲಾಗಿದೆ.
ಇಂದು ಹಾಸನದ 3ನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯ ನ್ಯಾಯಾಧೀಶರು ಸಂಸದ ಪ್ರಜ್ವಲ್ ರೇವಣ್ಣ ಮಾಜಿ ಕಾರು ಚಾಲಕ ಕಾರ್ತಿಕ್ ಸಲ್ಲಿಸಿದ್ದಂತ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಿಚಾರಣೆ ಕೈಗೆತ್ತಿಕೊಂಡರು. ಈ ಅರ್ಜಿಯನ್ನು ವಿಚಾರಣೆ ನಡೆಸಿದಂತ ನ್ಯಾಯಾಧೀಶರು, ಅಂತಿಮವಾಗಿ ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ಪ್ರಜ್ವಲ್ ಮಾಜಿ ಕಾರು ಚಾಲಕ ಕಾರ್ತಿಕ್ ಸಲ್ಲಿಸಿದ್ದಂತ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾಗೊಳಿಸಿದ್ದಾರೆ.
BREAKING: ಮಹಿಳೆ ಅಪಹರಣ ಪ್ರಕರಣ: ನಾಳೆಗೆ ಶಾಸಕ ಹೆಚ್.ಡಿ ರೇವಣ್ಣ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ