ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರು ಲೈಂಗಿಕ ದೌರ್ಜನ್ಯ ನಡೆಸಿದ್ದಾರೆಂಬ ಆರೋಪದ ಪ್ರಕರಣಗಳ ತನಿಖೆಗೆ ರಚಿಸಲಾಗಿರುವ ವಿಶೇಷ ತನಿಖಾ ದಳವು ದಾಖಲಿಸುವ ಪ್ರಕರಣಗಳಲ್ಲಿ ನ್ಯಾಯಾಲಯದಲ್ಲಿ ಹಾಜರಾಗಲು ಹಾಗೂ ಪ್ರಕರಣಗಳನ್ನು ನಡೆಸಲು ಇಬ್ಬರು ಹೆಚ್ಚುವರಿ ಸರ್ಕಾರಿ ಅಭಿಯೋಜಕರನ್ನು ನೇಮಕ ಮಾಡಲಾಗಿದೆ.
ಈ ಕುರಿತಂತೆ ಇಂದು ಸಿಎಂ ಕಚೇರಿಯಿಂದ ಮಾಧ್ಯಮ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಎಸ್.ಐ. ಟಿ. ಮುಂದೆ ದಾಖಲಾಗುವ ಪ್ರಕರಣಗಳಿಗೆ ಇಬ್ಬರು ಹೆಚ್ಚುವರಿ ವಿಶೇಷ ಸರ್ಕಾರಿ ಅಭಿಯೋಜಕರ ನೇಮಕ ಮಾಡಲಾಗಿದೆ. ಇದು ತಂಡವನ್ನು ಬಲಪಡಿಸುವ ಉದ್ದೇಶದಿಂದ ಹಿರಿಯ ವಕೀಲರಾದ ಅಶೋಕ್ ನಾಯಕ್ ಹಾಗೂ ಜಯನಾ ಕೊಠಾರಿ ಅವರನ್ನು ಹೆಚ್ಚುವರಿ ವಿಶೇಷ ಸರ್ಕಾರಿ ಅಭಿಯೋಜಕರನ್ನಾಗಿ ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ ಎಂದು ತಿಳಿಸಿದೆ.
BREAKING: ರಾಜ್ಯ ಸರ್ಕಾರದಿಂದ ‘ಪದವಿ’ ಕಾರ್ಯಕ್ರಮಗಳ ‘ಅವಧಿ, ಪಠ್ಯಕ್ರಮ’ಗಳನ್ನು ಪರಿಷ್ಕರಿಸಿ ಆದೇಶ
ಈ ಅವಧಿಯ ನಂತ್ರ ಈ ಖಾತೆಗಳನ್ನ ಮುಚ್ಚಲಾಗುವುದು : ಗ್ರಾಹಕರಿಗೆ ‘ಪಂಜಾಬ್ ನ್ಯಾಷನಲ್ ಬ್ಯಾಂಕ್’ ಎಚ್ಚರಿಕೆ