Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಹಾವೇರಿ : ಕರ್ತವ್ಯ ಲೋಪ ಹಿನ್ನಲೆ, ಗುತ್ತಲ ಠಾಣೆ PSI ಸಸ್ಪೆಂಡ್ ಮಾಡಿ ಆದೇಶ

05/03/2026 11:10 AM

ಅಪ್ರಾಪ್ತ ದಿವ್ಯಾಂಗ ಬಾಲಕಿ ಮೇಲೆ ಅತ್ಯಾಚಾರ : ಆರೋಪಿಗೆ 40 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿದ ಕೋರ್ಟ್!

05/03/2026 11:09 AM

BREAKING : ಅಮೆರಿಕ-ಇಸ್ರೇಲ್-ಇರಾನ್ ಸಂಘರ್ಷದ ಎಫೆಕ್ಟ್ : ಚಿನ್ನ, ಬೆಳ್ಳಿ ಬೆಲೆಯಲ್ಲಿ ಭಾರೀ ಏರಿಕೆ

05/03/2026 11:01 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬಿಜೆಪಿ ನಾಯಕರೇ, ನಿಮಗೆ ಮಾನ-ಮರ್ಯಾದೆ ಇದ್ದರೆ ಈ ಹೇಳಿಕೆ ಹಿಂಪಡೆಯಿರಿ: ಸಿಎಂ ಸಿದ್ಧರಾಮಯ್ಯ
KARNATAKA

ಬಿಜೆಪಿ ನಾಯಕರೇ, ನಿಮಗೆ ಮಾನ-ಮರ್ಯಾದೆ ಇದ್ದರೆ ಈ ಹೇಳಿಕೆ ಹಿಂಪಡೆಯಿರಿ: ಸಿಎಂ ಸಿದ್ಧರಾಮಯ್ಯ

By kannadanewsnow0908/05/2024 4:46 PM

ಬೆಂಗಳೂರು: ರಾಜ್ಯದ ಬಿಜೆಪಿ ನಾಯಕರೇ, ನಿಮಗೆ ಮಾನ-ಮರ್ಯಾದೆ ಎನ್ನುವುದೇನಾದರೂ ಇದ್ದರೆ ಮೊದಲು ಜನರನ್ನು ತಪ್ಪುದಾರಿಗೆಳೆಯುವ ಈ ಹೇಳಿಕೆಯನ್ನು ವಾಪಸು ಪಡೆಯುವಂತೆ ಸಿಎಂ ಸಿದ್ಧರಾಮಯ್ಯ ಆಗ್ರಹಿಸಿದ್ದಾರೆ.

ಇಂದು ಎಕ್ಸ್ ನಲ್ಲಿ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವಂತ ಅವರು, ಬಿಜೆಪಿ ನಾಯಕರೇ, ನಮ್ಮ ಕೈಗೆ ಬಡಿಗೆ ಕೊಟ್ಟು ಮತ್ತೆ ಮತ್ತೆ ಯಾಕೆ ಬಡಿಸಿಕೊಳ್ಳೀರಿ? ನಿಮ್ಮ ಸುಳ್ಳುಗಳನ್ನು ಬಯಲು ಮಾಡಲು ಅವಕಾಶ ಕೊಟ್ಟು ಸಮಾಜದ ಎದುರು ಯಾಕೆ ಬೆತ್ತಲಾಗುತ್ತೀರಿ? ಕಾಂಗ್ರೆಸ್ ಸರ್ಕಾರ ಹೊಸಕೋಟೆಯ ಅವಿಮುಕ್ತೇಶ್ವರ ಸ್ವಾಮಿ ದೇವಸ್ಥಾನದ ಬ್ರಹ್ಮೋತ್ಸವ ಸಮಿತಿಗೆ ಮುಸ್ಲಿಮ್ ಸಮುದಾಯದ ನವಾಜ್ ಅವರನ್ನು ಸದಸ್ಯರನ್ನಾಗಿ ಮಾಡಿದೆ ಎಂದು ಎದೆಬಡಿದುಕೊಳ್ಳೀರಲ್ಲಾ? ಎಂದು ಪ್ರಶ್ನಿಸಿದ್ದಾರೆ.

ನಿಮ್ಮದೇ ಪಕ್ಷದ ಸರ್ಕಾರ 2020 ಮತ್ತು 2022ರ ಸಾಲಿನಲ್ಲಿ ಇದೇ ಬ್ರಹ್ಮೋತ್ಸವ ಸಮಿತಿಗೆ ಮುಸ್ಲಿಮ್ ಸಮುದಾಯ ವ್ಯಕ್ತಿಗಳನ್ನು ಸದಸ್ಯರನ್ನಾಗಿ ಮಾಡಿದಾಗ ನಿಮ್ಮಲ್ಲಿ ಈಗ ಉಕ್ಕಿ ಹರಿಯುತ್ತಿರುವ ಹಿಂದುತ್ವದ ಅಭಿಮಾನ ಆಗ ಎಲ್ಲಿ ಅಡಗಿ ಕೂತಿತ್ತು? ಎಂದು ಕೇಳಿದ್ದಾರೆ.

ಹೊಸಕೋಟೆಯ ಅವಿಮುಕ್ತೇಶ್ವರ ಸ್ವಾಮಿ ದೇವಸ್ಥಾನ ಸರ್ವಧರ್ಮಗಳನ್ನು ಸಮಭಾವದಿಂದ ಕಾಣುವ ಹಿಂದು ಧರ್ಮದ ಪರಂಪರೆಗೆ ಸಾಕ್ಷಿಯಾಗಿದೆ. ಅಲ್ಲಿನ ಪ್ರತಿಯೊಂದು ಧಾರ್ಮಿಕ ಕಾರ್ಯಕ್ರಮಗಳಲ್ಲಿಯೂ ಎಲ್ಲ ಧರ್ಮಗಳ ಜನತೆ ಭಕ್ತಿ-ಗೌರವದಿಂದ ಭಾಗವಹಿಸುತ್ತಾರೆ. 2020ರಲ್ಲಿ ರಾಜ್ಯದಲ್ಲಿ ಅಧಿಕಾರದಲ್ಲಿದ್ದ ಬಿಜೆಪಿ  ಸರ್ಕಾರ ಈ ದೇವಸ್ಥಾನದ ಬ್ರಹ್ಮರಥೋತ್ಸವ ಸಮಿತಿಗೆ ಇಮ್ತಿಯಾಜ್ ಪಾಷಾ ಅವರನ್ನು ಸದಸ್ಯರನ್ನಾಗಿ ನೇಮಿಸಿತ್ತು. 2022ರಲ್ಲಿ ಬಿಜೆಪಿ ಸರ್ಕಾರ ಮತ್ತೆ ಈ ಸಮಿತಿಗೆ ಅಪ್ಸರ್ ಅವರನ್ನು ಸದಸ್ಯರನ್ನಾಗಿ ಮಾಡಿತ್ತು ಎಂಬುದಾಗಿ ಸ್ಪಷ್ಟ ಪಡಿಸಿದ್ದಾರೆ.

ಅವಿಮುಕ್ತೇಶ್ವರ ಸ್ವಾಮಿ ದೇವಸ್ಥಾನದ ಸಂಪತ್ತು ಲೂಟಿ ಮಾಡುವ ದುರುದ್ದೇಶದಿಂದಲೇ ಬಿಜೆಪಿ ಸರ್ಕಾರ ಬ್ರಹ್ಮರಥೋತ್ಸವ ಸಮಿತಿಗೆ ಮುಸ್ಲಿಮರನ್ನು ಸದಸ್ಯರನ್ನಾಗಿ ಮಾಡಿದೆ ಎಂದು ಆರೋಪಿಸುವಷ್ಟು ಕೀಳು ಮಟ್ಟಕ್ಕೆ ನಾನಿಳಿಯಲಾರೆ. ಎಲ್ಲವನ್ನೂ ಕೇಸರಿ ಕಣ್ಣುಗಳಿಂದ ನೋಡುವ ರೋಗದಿಂದ ಶೀಘ್ರ ಗುಣಮುಖರಾಗಿ ಎಂದು ನಿಮಗೂ ನಿಮ್ಮ ಸರ್ವೋಚ್ಚ ನಾಯಕರಾದ ನರೇಂದ್ರ ಮೋದಿ ಅವರಿಗೆ ಹಾರೈಸುತ್ತೇನೆ ಎಂದಿದ್ದಾರೆ.

ರಾಜ್ಯದ ಬಿಜೆಪಿ ನಾಯಕರೇ, ನಿಮಗೆ ಮಾನ-ಮರ್ಯಾದೆ ಎನ್ನುವುದೇನಾದರೂ ಇದ್ದರೆ ಮೊದಲು ಜನರನ್ನು ತಪ್ಪುದಾರಿಗೆಳೆಯುವ ಈ ಹೇಳಿಕೆಯನ್ನು ವಾಪಸು ಪಡೆದು ರಾಜ್ಯದ ಜಾತ್ಯತೀತ ಕನ್ನಡಿಗರ ಕ್ಷಮೆ ಕೇಳಬೇಕೆಂದು ಒತ್ತಾಯಿಸಿದ್ದಾರೆ.

ಬಿಜೆಪಿ ನಾಯಕರೇ, ನಮ್ಮ ಕೈಗೆ ಬಡಿಗೆ ಕೊಟ್ಟು ಮತ್ತೆ ಮತ್ತೆ ಯಾಕೆ ಬಡಿಸಿಕೊಳ್ಳೀರಿ? ನಿಮ್ಮ ಸುಳ್ಳುಗಳನ್ನು ಬಯಲು ಮಾಡಲು ಅವಕಾಶ ಕೊಟ್ಟು ಸಮಾಜದ ಎದುರು ಯಾಕೆ ಬೆತ್ತಲಾಗುತ್ತೀರಿ? ಕಾಂಗ್ರೆಸ್ ಸರ್ಕಾರ ಹೊಸಕೋಟೆಯ ಅವಿಮುಕ್ತೇಶ್ವರ ಸ್ವಾಮಿ ದೇವಸ್ಥಾನದ ಬ್ರಹ್ಮೋತ್ಸವ ಸಮಿತಿಗೆ ಮುಸ್ಲಿಮ್ ಸಮುದಾಯದ ನವಾಜ್ ಅವರನ್ನು ಸದಸ್ಯರನ್ನಾಗಿ ಮಾಡಿದೆ ಎಂದು… pic.twitter.com/nQmgmdUZXH

— Siddaramaiah (@siddaramaiah) May 8, 2024

ಮೇ.10ರಂದು ‘ಸುಪ್ರೀಂ ಕೋರ್ಟ್’ನಿಂದ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ಕುರಿತ ತೀರ್ಪು ಪ್ರಕಟ | Arvind Kejriwal

ನಾಳೆ ಬೆಳಗ್ಗೆ 10.30ಕ್ಕೆ ‘SSLC’ ಫಲಿತಾಂಶ ಪ್ರಕಟ : ಈ ರೀತಿ ‘ರಿಸಲ್ಟ್’ ಚೆಕ್ ಮಾಡಿ | Karnataka SSLC Exam results 2024

Share. Facebook Twitter LinkedIn WhatsApp Email

Related Posts

ಹಾವೇರಿ : ಕರ್ತವ್ಯ ಲೋಪ ಹಿನ್ನಲೆ, ಗುತ್ತಲ ಠಾಣೆ PSI ಸಸ್ಪೆಂಡ್ ಮಾಡಿ ಆದೇಶ

05/03/2026 11:10 AM1 Min Read

ಅಪ್ರಾಪ್ತ ದಿವ್ಯಾಂಗ ಬಾಲಕಿ ಮೇಲೆ ಅತ್ಯಾಚಾರ : ಆರೋಪಿಗೆ 40 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿದ ಕೋರ್ಟ್!

05/03/2026 11:09 AM1 Min Read

BREAKING : ಕೇಂದ್ರ ಸಚಿವ ವಿ.ಸೋಮಣ್ಣ ಸಹೋದರಿ ‘ಮಹಾದೇವಮ್ಮ’ ನಿಧನ | Mahadevamma passes away

05/03/2026 10:54 AM1 Min Read
Recent News

ಹಾವೇರಿ : ಕರ್ತವ್ಯ ಲೋಪ ಹಿನ್ನಲೆ, ಗುತ್ತಲ ಠಾಣೆ PSI ಸಸ್ಪೆಂಡ್ ಮಾಡಿ ಆದೇಶ

05/03/2026 11:10 AM

ಅಪ್ರಾಪ್ತ ದಿವ್ಯಾಂಗ ಬಾಲಕಿ ಮೇಲೆ ಅತ್ಯಾಚಾರ : ಆರೋಪಿಗೆ 40 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿದ ಕೋರ್ಟ್!

05/03/2026 11:09 AM

BREAKING : ಅಮೆರಿಕ-ಇಸ್ರೇಲ್-ಇರಾನ್ ಸಂಘರ್ಷದ ಎಫೆಕ್ಟ್ : ಚಿನ್ನ, ಬೆಳ್ಳಿ ಬೆಲೆಯಲ್ಲಿ ಭಾರೀ ಏರಿಕೆ

05/03/2026 11:01 AM

ಮಾರುಕಟ್ಟೆಯಲ್ಲಿ ಗೂಳಿ ಅಬ್ಬರ: ಇರಾನ್ ಯುದ್ಧದ ಆತಂಕದ ನಡುವೆಯೂ ಸೆನ್ಸೆಕ್ಸ್, ನಿಫ್ಟಿ ಭರ್ಜರಿ ಚೇತರಿಕೆ! ಚೇತರಿಸಿಕೊಂಡ ರೂಪಾಯಿ

05/03/2026 11:01 AM
State News
KARNATAKA

ಹಾವೇರಿ : ಕರ್ತವ್ಯ ಲೋಪ ಹಿನ್ನಲೆ, ಗುತ್ತಲ ಠಾಣೆ PSI ಸಸ್ಪೆಂಡ್ ಮಾಡಿ ಆದೇಶ

By kannadanewsnow0505/03/2026 11:10 AM KARNATAKA 1 Min Read

ಹಾವೇರಿ : ಕರ್ತವ್ಯ ಲೋಪ ಹಿನ್ನಲೆ ಹಾವೇರಿ ಜಿಲ್ಲೆಯ ಗುತ್ತಲ ಠಾಣೆ ಪಿಎಸ್ಐ ಬಸನಗೌಡ ಬಿರಾದರ ಅಮಾನತುಗೊಳಿಸಿ ದಾವಣಗೆರೆ ಪೂರ್ವ…

ಅಪ್ರಾಪ್ತ ದಿವ್ಯಾಂಗ ಬಾಲಕಿ ಮೇಲೆ ಅತ್ಯಾಚಾರ : ಆರೋಪಿಗೆ 40 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿದ ಕೋರ್ಟ್!

05/03/2026 11:09 AM

BREAKING : ಕೇಂದ್ರ ಸಚಿವ ವಿ.ಸೋಮಣ್ಣ ಸಹೋದರಿ ‘ಮಹಾದೇವಮ್ಮ’ ನಿಧನ | Mahadevamma passes away

05/03/2026 10:54 AM

ರಾಜ್ಯದ ವಿಕಲಚೇತನರಿಗೆ ಗುಡ್ ನ್ಯೂಸ್ : ಸರ್ಕಾರದಿಂದ ನಿಮಗೆ ಸಿಗಲಿವೆ ಈ ಎಲ್ಲಾ ಸೌಲಭ್ಯಗಳು !

05/03/2026 10:40 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.