ಬೆಂಗಳೂರು: ರಾಜ್ಯದಲ್ಲಿ ಈ ವರ್ಷ ಎಸ್ಎಸ್ಎಲ್ಸಿ ಪರೀಕ್ಷೆ -1ರ ಫಲಿತಾಂಶವು ಶೇಕಡಾ 10.49 ರಷ್ಟು ಕುಸಿದಿದೆ. ಇದರ ನಡುವೆ ಶೇ.73.40ರಷ್ಟು ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ.
ಇಂದು ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯಮಾಪನ ಮಂಡಳಿಯು ಫಲಿತಾಂಶವನ್ನು ಪ್ರಕಟಿಸಿದ್ದು, ಒಟ್ಟಾರೆ ತೇರ್ಗಡೆ ಪ್ರಮಾಣ 73.40 ರಷ್ಟಿದೆ. 2022-23ನೇ ಸಾಲಿನಲ್ಲಿ ಶೇ.83.89ರಷ್ಟು ಫಲಿತಾಂಶ ಬಂದಿತ್ತು.
ವಿದ್ಯಾರ್ಥಿಗಳು ಎಸ್ ಎಸ್ ಎಲ್ ಸಿ ಫಲಿತಾಂಶವನ್ನು https://kseab.karnataka.gov.in ಲಿಂಕ್ ನಲ್ಲಿ ನೋಡಬಹುದಾಗಿದೆ. ಮಂಡಳಿಯು ನೋಂದಾಯಿತ ಮೊಬೈಲ್ ಸಂಖ್ಯೆಗಳಲ್ಲಿ ವಿದ್ಯಾರ್ಥಿಗಳಿಗೆ ಫಲಿತಾಂಶಗಳನ್ನು ಕಳುಹಿಸುತ್ತದೆ. ಇದನ್ನು ಇಂದು ಶಾಲೆಗಳಲ್ಲಿ ಪ್ರದರ್ಶಿಸಲಾಗುವುದು.
ಪರೀಕ್ಷೆಗೆ ಹಾಜರಾದ ಒಟ್ಟು 8,59,967 ವಿದ್ಯಾರ್ಥಿಗಳಲ್ಲಿ 6,31,204 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
ಮುಧೋಳದ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಅಂಕಿತಾ ಬಸಪ್ಪ ಕೊಣ್ಣೂರ 625ಕ್ಕೆ 625 ಅಂಕಗಳನ್ನು ಗಳಿಸಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ. ಏಳು ವಿದ್ಯಾರ್ಥಿಗಳು ದ್ವಿತೀಯ ಸ್ಥಾನ ಹಂಚಿಕೊಂಡಿದ್ದಾರೆ.
ಉಡುಪಿ ಜಿಲ್ಲೆ ಶೇ.94ರಷ್ಟು ಫಲಿತಾಂಶದೊಂದಿಗೆ ರಾಜ್ಯಕ್ಕೆ ಮೊದಲ ಸ್ಥಾನದಲ್ಲಿದ್ದರೆ, ದಕ್ಷಿಣ ಕನ್ನಡ, ಶಿವಮೊಗ್ಗ, ಕೊಡಗು ಮತ್ತು ಉತ್ತರ ಕನ್ನಡ ಜಿಲ್ಲೆಗಳು ನಂತರದ ಸ್ಥಾನಗಳಲ್ಲಿವೆ.
ಕಾಂಗ್ರೆಸ್ ನಿಂದ ಜನಾಂಗೀಯ ನಿಂದನೆ, ಶಾಂತಿಯ ತೋಟ ಕದಡಿದ್ದಾರೆ: ಆರ್.ಅಶೋಕ ಆಕ್ರೋಶ
ಪೆನ್ ಡ್ರೈವ್ ಪ್ರಕರಣದಲ್ಲಿ ಕುಮಾರಸ್ವಾಮಿನ ಹೋರಾಟ ಮಾಡದಂತೆ ಯಾರು ತಡೆದಿಲ್ಲ: ಡಿಸಿಎಂ ಡಿಕೆಶಿ