ನವದೆಹಲಿ: ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ಸಂತ್ರಸ್ತ ಮಹಿಳೆಗೆ ಅವರ ವಿರುದ್ಧ ದೂರು ನೀಡಲು ಒತ್ತಡ ಹಾಕಲಾಗಿದೆ ಎಂಬುದಾಗಿ ರಾಷ್ಟ್ರೀಯ ಮಹಿಳಾ ಆಯೋಗವು ಸ್ಪೋಟಕ ಹೇಳಿಕೆ ನೀಡಿದೆ.
ಇಂದು ಪತ್ರಿಕಾ ಪ್ರಕಟಣೆಯಲ್ಲಿ ತನ್ನ ಹೇಳಿಕೆ ಬಿಡುಗಡೆ ಮಾಡಿರುವಂತ ರಾಷ್ಟ್ರೀಯ ಮಹಿಳಾ ಆಯೋಗವು, ಪ್ರಜ್ವಲ್ ರೇವಣ್ಣ ವಿರುದ್ಧ ಸುಳ್ಳು ದೂರು ನೀಡಲು ಮಹಿಳೆಯ ಮೇಲೆ ಒತ್ತಡ ಹೇರಲಾಗಿದೆ. ಒತ್ತಡ ಹಾಕಿ ಸಂತ್ರಸ್ತ ಮಹಿಳೆಯಿಂದ ದೂರು ಕೊಡಿಸಲಾಗಿದೆ ಎಂಬುದಾಗಿ ಸ್ಪೋಟಕ ಹೇಳಿಕೆ ನೀಡಿದೆ.
ರಾಷ್ಟ್ರೀಯ ಮಹಿಳಾ ಆಯೋಗಕ್ಕೆ ಸಂತ್ರಸ್ತೆ ದೂರು ನೀಡಿರುವುದಾಗಿ ಮಾಹಿತಿ ನೀಡಿದ್ದೂ, ಪ್ರಕರಣ ಸಂಬಂಧ ತನಿಖೆ ನಡೆಸೋದಕ್ಕೆ ವಿಶೇಷ ತಂಡ ರಚನೆ ಮಾಡಲಾಗಿದೆ ಎಂಬುದಾಗಿ ಪ್ರಜ್ವಲ್ ರೇವಣ್ಣ ವಿರುದ್ಧದ ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ರಾಷ್ಟ್ರೀಯ ಮಹಿಳಾ ಆಯೋಗ ಈ ಹೇಳಿಕೆ ಬಿಡುಗಡೆ ಮಾಡಿದೆ.
ಮಂಡ್ಯದಲ್ಲಿ SSLC ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹತ್ಯೆ
ಪೆನ್ ಡ್ರೈವ್ ಪ್ರಕರಣದಲ್ಲಿ ಕುಮಾರಸ್ವಾಮಿನ ಹೋರಾಟ ಮಾಡದಂತೆ ಯಾರು ತಡೆದಿಲ್ಲ: ಡಿಸಿಎಂ ಡಿಕೆಶಿ