ಬೆಂಗಳೂರು : ಬೆಂಗಳೂರಿನಲ್ಲಿ ಘೋರ ದುರಂತ ಒಂದು ನಡೆದಿದ್ದು ಪಿಜಿ ಕಟ್ಟಡದ ಮೇಲಿನಿಂದ ಹಾರಿ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವೈಟ್ ಫೀಲ್ಡ್ ಠಾಣಾ ವ್ಯಾಪ್ತಿಯ ಅಂಬೇಡ್ಕರ್ ನಗರದಲ್ಲಿ ನಡೆದಿದೆ.
ಮೃತನನ್ನು ಕಲಬುರ್ಗಿ ಮೂಲದ 28 ವರ್ಷದ ಯುವಕ ಎಂದು ಹೇಳಲಾಗುತ್ತಿದ್ದು, ಪಿಜಿ ಕಟ್ಟಡದ ಮೇಲಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ.ಆತ್ಮಹತ್ಯೆ ಮಾಡಿಕೊಂಡ ಯುವಕ ಕೆಲಸ ಹುಡುಕಿಕೊಂಡು ಬಂದಿದ್ದ ಎನ್ನಲಾಗುತ್ತಿದೆ.
ಆದರೆ ಆತನಿಗೆ ಎಲ್ಲೂ ಕೂಡ ಕೆಲಸ ಸಿಕ್ಕಿರಲಿಲ್ಲ. ಇದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗುತ್ತಿದ್ದು, ಘಟನೆ ಕುರಿತಂತೆ ವೈಟ್ ಫೀಲ್ಡ್ ಠಾಣೆ ಪೊಲೀಸರು ಕೇಸ್ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.