ಬೆಂಗಳೂರು: ರಾಜ್ಯದಲ್ಲಿ ಲೋಕಸಭಾ ಚುನಾವಣೆಯ ಎರಡು ಹಂತದ ಮತದಾನ ಮುಕ್ತಾಯಗೊಂಡಿದೆ. ಇನ್ನೂ ಜೂನ್.4ರಂದು ಫಲಿತಾಂಶ ಪ್ರಕಟಗೊಳ್ಳುವುದೊಂದೇ ಬಾಕಿ ಇದೆ. ಈಗ ಲೋಕಸಭಾ ಚುನಾವಣಾ ನೀತಿ ಸಂಹಿತೆ ಮುಗಿಯುತ್ತಿದ್ದಂತೆ, ಸಿಎಂ ಸಿದ್ಧರಾಮಯ್ಯ 7ನೇ ವೇತನ ಆಯೋಗ ಜಾರಿಗೆ ಒಲವು ತೋರಿದ್ದಾರೆ ಎನ್ನಲಾಗಿದೆ. ಹೀಗಾಗಿ ರಾಜ್ಯ ಸರ್ಕಾರಿ ನೌಕರರಿಗೆ ಸದ್ಯದಲ್ಲೇ ಸಿಹಿಸುದ್ದಿ ಹೊರಬೀಳಲಿದೆ.
ಹೌದು ಲೋಕಸಭಾ ಚುನಾವಣೆ ಫಲಿತಾಂಶ ಪ್ರಕಟಗೊಂಡು, ಕರ್ನಾಟಕದಲ್ಲಿ ಮಾದರಿ ನೀತಿ ಸಂಹಿತೆ ಸಡಿಲಿಕೆಯಾಗುತ್ತಿದ್ದಂತೆ, ರಾಜ್ಯ ಸರ್ಕಾರಿ ನೌಕರರ ಬಹುದಿನಗಳ ಬೇಡಿಕೆ ಈಡೇರಿಕೆಗೆ ಸಿಎಂ ಸಿದ್ಧರಾಮಯ್ಯ ಒಲವು ತೋರಿದ್ದಾರೆ ಎಂಬುದಾಗಿ ಹೇಳಲಾಗುತ್ತಿದೆ.
ರಾಜ್ಯ ಸರ್ಕಾರಿ ನೌಕರರಿಗೆ ವೇತನ ಪರಿಷ್ಕರಣೆ ಸಂಬಂಧದ 7ನೇ ವೇತನ ಆಯೋಗದ ಶಿಫಾರಸ್ಸುಗಳನ್ನು ಅನುಷ್ಠಾನಗೊಳಿಸಲು ಸರ್ಕಾರ ಮುಂದಾಗಿದೆ.
ಸರ್ಕಾರದ ನಿವೃತ್ತ ಮುಖ್ಯ ಕಾರ್ಯದರ್ಶಿ ಸುಧಾಕರ್ ರಾವ್ ನೇತೃತ್ವದ ಸಮಿತಿ ನೀಡಿರುವಂತ 7ನೇ ವೇತನ ಆಯೋಗದ ಶಿಫಾರಸ್ಸುಗಳನ್ನು ಲೋಕಸಭಾ ಚುನಾವಣೆ ನೀತಿ ಸಂಹಿತೆ ಮುಕ್ತಾಯಗೊಂಡ ನಂತ್ರ ಜಾರಿಗೊಳಿಸೋದಕ್ಕೆ ಸಿಎಂ ಸಿದ್ಧರಾಮಯ್ಯ ಕ್ರಮವಹಿಸಲಿದ್ದಾರೆ ಎನ್ನಲಾಗುತ್ತಿದೆ.
ಅಂದಹಾಗೇ ರಾಜ್ಯ ಸರ್ಕಾರಿ ನೌಕರರು 7ನೇ ವೇತನ ಆಯೋಗದ ವರದಿ ಜಾರಿಗಾಗಿ ಜಾತಕ ಪಕ್ಷಿಯಂತೆ ಕಾಯುತ್ತಿದದಾರೆ. ಇವರಿಗೆ ಚುನಾವಣಾ ನೀತಿ ಸಂಹಿತೆ ಮುಗಿದ ನಂತ್ರ ಸಿಎಂ ಸಿದ್ಧರಾಮಯ್ಯ ಸಿಹಿಸುದ್ದಿ ನೀಡಲಿದ್ದಾರೆ ಎಂಬುದಾಗಿ ಹೇಳಲಾಗುತ್ತಿದೆ. ಆ ಬಗ್ಗೆ ಜೂನ್.4ರ ನಂತ್ರದವರೆಗೆ ಕಾದು ನೋಡಬೇಕಿದೆ.
BREAKING: ಹೆಚ್.ಡಿ ರೇವಣ್ಣಗೆ ‘3 ದಿನ’ ಜೈಲೇ ಗತಿ: ಮಹಿಳೆ ಕಿಡ್ನ್ಯಾಪ್ ಕೇಸ್ ‘ಜಾಮೀನು ಅರ್ಜಿ’ ಮುಂದೂಡಿಕೆ
ಮಂಡ್ಯದಲ್ಲಿ SSLC ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹತ್ಯೆ