ಬೆಂಗಳೂರು : ಕಳೆದ ಕೆಲವು ದಿನಗಳಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಜನರು ಹಾಗೂ ರೈತರು ಬಿಸಿಲಿನ ಬೇಗೆಯಿಂದ ಕಂಗೆಟ್ಟಿದ್ದು ಮಳೆಯಿಂದಾಗಿ ಸ್ವಲ್ಪ ನಿಟ್ಟುಸಿರುಬಿಟ್ಟಿದ್ದಾರೆ. ಇದೀಗ ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಸಂಜೆ ಬಾರಿ ಮಳೆ ಆಯಿತು.
ಹೌದು ಇಂದು ಸಂಜೆ ಬೆಂಗಳೂರಿನಲ್ಲಿ ವರುಣನ ಆರ್ಭಟ ಜೋರಾಗಿತ್ತು. ಮೆಜೆಸ್ಟಿಕ್, ಯಶವಂತಪುರ, ರಾಜಾಜಿನಗರ, ಮಲ್ಲೇಶ್ವರಂ, ವಿಜಯನಗರ, ಭಾಷ್ಯಂ ಸರ್ಕಲ್ ಸೇರಿದಂತೆ ಮಹಾನಗರದ ಹಲವೆಡೆ ಮಳೆ ಶುರುವಾಗಿದ್ದು, ಮಳೆ ಹಿನ್ನೆಲೆ ವಾಹನ ಸವಾರರು ಪರದಾಡುವಂತಾಗಿದೆ.
ಅಲ್ಲದೆ ಇತ್ತ ನೆಲಮಂಗಲದಲ್ಲಿ ಕೂಡ ಭಾರಿ ಮಳೆಯಾಗಿದ್ದು, ಮಳೆಯದ ಕಾರಣದಿಂದ ಬಾಳೆ, ಅಡಿಕೆ ಮರಗಳು ನೆಲಕಚ್ಚಿದ್ದವು. ಇಂದು ಕೂಡ ಪೀಣ್ಯಾ,ದಾಸರಹಳ್ಳಿ, ಬಾಗಲಗುಂಟೆ, ಶೆಟ್ಟಿಹಳ್ಳಿ, ಮಲ್ಲಸಂದ್ರ ಸೇರಿದಂತೆ ಬಿರುಗಾಳಿ ಸಹಿತ ಬಾರಿ ಮಳೆ ಶುರುವಾಗಿದೆ. ಸುರಿಯುತ್ತಿರುವ ಮಳೆಯಿಂದಾಗಿ ವಾಹನ ಸವಾರರು ಹೈರಾಣಾಗಿದ್ದಾರೆ.ಏನಾದರು ಅಗಲಿ ಒಟ್ಟಿನಲ್ಲಿ ಮಳೆಯಾಗುತ್ತಿದೆ ಅಂತ ರೈತರು ಸಂತಸ ವ್ಯಕ್ತಪಡಿಸಿದ್ದಾರೆ.