ಬೆಂಗಳೂರು: . ಶುಕ್ರವಾರವೂ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕೋಲಾರ, ಮಂಡ್ಯ, ಮೈಸೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರಕ್ಕೆ ಶುಕ್ರವಾರ ಯೆಲ್ಲೋ ಅಲರ್ಟ್ ನೀಡಲಾಗಿದೆ. ಈ ಜಿಲ್ಲೆಗಳಲ್ಲಿ ಶುಕ್ರವಾರ ಉತ್ತಮ ಮಳೆಯಾಗುವ ಸಾಧ್ಯತೆ ಇದೆ. ಇದಲ್ಲದೇ ಕೋಲಾರ, ಮಂಡ್ಯ, ಮೈಸೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರಕ್ಕೆ ಯೆಲ್ಲೋ ಅಲರ್ಟ್ ಘೋಷಿಸಿದೆ.
ಚಿಕ್ಕಮಗಳೂರು, ಹಾಸನ, ದಾವಣಗೆರೆ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಮತ್ತು ವಿಜಯನಗರ, ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು. ಈ ನಡುವೆ ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.