ಹಾಸನ: ಜಿಲ್ಲೆಯಲ್ಲಿ ಸದ್ದು ಮಾಡಿ, ದೇಶದಲ್ಲೇ ವ್ಯಾಪಕ ಸುದ್ದಿಗೆ ಕಾರಣವಾಗಿದ್ದಂ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೋ ಸಂಬಂಧ ವಕೀಲ ದೇವರಾಜೇಗೌಡ ಹಾಗೂ ಮಾಜಿ ಕಾರು ಚಾಲಕ ಕಾರ್ತಿಕ್ ಗೆ ಎಸ್ಐಟಿ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ.
ಹಾಸನ ಪೆನ್ ಡ್ರೈವ್ ಕೇಸ್ ಸಂಬಂಧ ಹಾಸನ ಸೈಬರ್ ಪೊಲೀಸ್ ಠಾಣೆ ಏಪ್ರಿಲ್.23ರಂದು ಚುನಾವಣಾ ಏಜೆಂಟ್ ಪೂರ್ಣಚಂದ್ರ ತೇಜಸ್ವಿ ದೂರು ನೀಡಿದ್ದರು. ಈ ದೂರನ್ನು ಆಧರಿಸಿ ಇದೀಗ ಪ್ರಜ್ವಲ್ ಮಾಜಿ ಕಾರು ಚಾಲಕ ಕಾರ್ತಿಕ್ ಹಾಗೂ ವಕೀಲ ದೇವರಾಜೇಗೌಡ ಅವರಿಗೆ ನೋಟಿಸ್ ನೀಡಲಾಗಿದೆ.
ಅಂದಹಾಗೇ ಇವರಿಬ್ಬರು ಅಲ್ಲದೇ ಕ್ವಾಲಿಟಿ ಬಾರ್ ಶರತ್, ನವೀನ್ ಗೌಡ ಹಾಗೂ ಚೇತನ್ ಗೌಡ ವಿರುದ್ಧವೂ ಹಾಸನದ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಈಗ ಈ ಪ್ರಕರಣ ಸಂಬಂಧವೂ ಎಸ್ಐಟಿ ಅಧಿಕಾರಿಗಳು ತನಿಖೆಯನ್ನು ಕೈಗೆತ್ತಿಕೊಂಡಿದ್ದಾರೆ.