ಬೆಂಗಳೂರು : ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿಯಾದ ಮೊಹಮ್ಮದ್ ಮುಸ್ತಾಫ ಪೈಚಾರ್ ನನ್ನು ಇದೀಗ NIA ಅಧಿಕಾರಿಗಳು ಬಂಧಿಸಿದ್ದು, ಹಳದಿ ಆತನಿಗೆ ಸಹಕರಿಸಿದ ಮತ್ತಿಬ್ಬರನ್ನು ಅವಶ್ಯಕತೆ ಪಡೆದು ಬೆಂಗಳೂರಿಗೆ ಕರೆತರುತ್ತಿದ್ದಾರೆ.
2022ರ ಜುಲೈ 26 ರಂದು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಬಿಜೆಪಿ ಯುವ ಮುಂಖಡ ಪ್ರವೀಣ್ ನೆಟ್ಟಾರು ಎಂಬಾತನನ್ನು, ಆತನ ಕೋಳಿ ಅಂಗಡಿ ಬಳಿಯೇ ಮಾರಕಾಸ್ತ್ರಗಳಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದರು.
ಬಳಿಕ ಗಂಭೀರವಾಗಿ ಗಾಯಗೊಂಡಿದ್ದ ಪ್ರವೀಣ್ ನೆಟ್ಟಾರ್ನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದರು. ಇದಾದ ಬಳಿಕ ದುಷ್ಕರ್ಮಿಗಳು ವಿವಿಧ ಕಡೆಗಳಿಗೆ ಪರಾರಿಯಾಗಿದ್ದರು.ಇದೀಗ ಸಕಲೇಶಪುರದ ಆನೆಮಹಲ್ ಬಳಿ ಸುಳ್ಯ ತಾಲೂಕಿನ ಬೆಳಾರೆಯ ಮೊಹಮ್ಮದ್ ಮುಸ್ತಾಫ ಪೈಚಾರ್, ಸೋಮವಾರಪೇಟೆ ಮೂಲದ ಇಲಿಯಾಸ್ ಹಾಗೂ ಸಿರಾಜ್ ಎನ್ನುವವರನ್ನು NIA ಬಂಧಿಸಿದೆ.