ಕೊಡಗು : ಕೊಡಗು ಜಿಲ್ಲೆಯಲ್ಲಿ ಎಸೆಸೆಲ್ಸಿ ವಿದ್ಯಾರ್ಥಿನಿಯ ಭೀಕರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಬಾಲಕಿಯನ್ನು ಕೊಲೆ ಮಾಡಿದ ಪ್ರಕಾಶ್ ಓಂಕಾರಪ್ಪ ಎನ್ನುವ ಕೊಲೆ ಆರೋಪಿ ಅದೇ ಗ್ರಾಮದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಆತನ ಶವ ಪತ್ತೆಯಾಗಿದೆ. ಈ ಮೂಲಕ ಆತ ಕೊಲೆ ಮಾಡಿದ ನಂತರ ಆತ್ಮಹತ್ಯೆ ಮಾಡಿಕೊಂಡಿರಬೇಕು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.
ಕೊಲೆ ಆರೋಪಿ ಪ್ರಕಾಶ್ ಓಂಕಾರಪ್ಪ ನೇಣು ಬಿಗಿದ ಸ್ಥಿತಿಯಲ್ಲಿ ಆತನ ಶವ ಪತ್ತೆಯಾಗಿದೆ. ಸೂರ್ಲಬ್ಬಿ ಗ್ರಾಮದ ಪ್ರಕಾಶ್ ಶವವಾಗಿ ಪತ್ತೆಯಾಗಿದ್ದಾನೆ.ಕೊಲೆ ಬಳಿಕ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಪೊಲೀಸರ ಶೋಧಕಾರ್ಯ ಸಂದರ್ಭದಲ್ಲಿ ಬಾಲಕಿಯ ರುಂಡ ಕೂಡ ಪತ್ತೆಯಾಗಿಲ್ಲ.ಇದೀಗ ಬಾಲಕಿಯ ರುಂಡಕ್ಕಾಗಿ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ.
ಘಟನೇ ಹಿನ್ನೆಲೆ?
ನಿನ್ನೆ ಕೊಡಗು ಜಿಲ್ಲೆಯ ಸೋಮವಾರಪೇಟೆಯ ಸೂರ್ಲಬಿ ಗ್ರಾಮದಲ್ಲಿ ಇಡಿ ರಾಜ್ಯವೇ ಬೆಚ್ಚಿಬೀಳುವ ಘಟನೆಯೊಂದು ನಡೆದಿದೆ. ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆದು ಪಾಸಾದ ಖುಷಿಯಲ್ಲಿದ್ದ ವಿದ್ಯಾರ್ಥಿನಿಯ ತಲೆ ಕಡಿದು ಕೊಲೆ ಮಾಡಲಾಗಿತ್ತು.
ಓಂಕಾರಾಪ್ಪ ಕೊಲೆ ಆರೋಪಿ. ಮೀನಾ ಮೃತ ವಿದ್ಯಾರ್ಥಿನಿ. ಮೀನಾ ಸೂರ್ಲಬ್ಬಿ ಸರ್ಕಾರಿ ಪ್ರೌಢಶಾಲೆಯಲ್ಲಿ 2023-24ನೇ ಸಾಲಿನಲ್ಲಿ ವ್ಯಾಸಾಂಗ ಮಾಡುತ್ತಿದ್ದಳು. ಗುರುವಾರ ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ಮೀನಾ ಉತ್ತಮ ಅಂಕ ಪಡೆದು ಪಾಸಾಗಿದ್ದಳು. ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಪಾಸಾದ ಖುಷಿಯಲ್ಲಿ ಮೀನಾ ಮತ್ತು ಆಕೆಯ ಪೋಷಕರು ಇದ್ದರು. ಆದರೆ ಈ ಖುಷಿ ಹೆಚ್ಚು ಹೊತ್ತು ಇರಲಿಲ್ಲ.
ಓಂಕಾರಪ್ಪನೊಂದಿಗೆ ಮೀನಾಳ ನಿಶ್ಚಿತಾರ್ಥ ನಿನ್ನೆ ಫಿಕ್ಸ್ ಮಾಡಲಾಗಿತ್ತು. ಈ ವಿಚಾರ ತಿಳಿದ ಗ್ರಾಮಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ವಿಚಾರ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು ನಿಶ್ಚಿತಾರ್ಥ ನಿಲ್ಲಿಸಿದ್ದಾರೆ. ಬಳಿಕ ಎರಡೂ ಕುಟುಂಬದವರು ತಮ್ಮ ತಮ್ಮ ಮನೆಗೆ ತೆರಳಿದ್ದಾರೆ. ಆರೋಪಿ ಕೂಡ ಮನೆಗೆ ವಾಪಸ್ ಆಗಿದ್ದನಂತೆ. ಇದೇ ಸಿಟ್ಟಿನಲ್ಲಿ ಕೊಲೆಗೈದಿರುವ ಶಂಕೆ ವ್ಯಕ್ತವಾಗಿದೆ.
ಇದೀಗ ಆರೋಪಿ ಪ್ರಕಾಶ್ ನೇಣು ಬಿಗಿದ ಸ್ಥಿತಿಯಲ್ಲಿ ಆತನ ಶವ ಪತ್ತೆಯಾಗಿದ್ದು ಆದರೆ ಬಾಲಕಿಯರುಂಡವನ್ನು ತೆಗೆದುಕೊಂಡು ಹೋಗಿರುವ ಪ್ರಕಾಶ್ಅದಾದ ಬಳಿಕ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೊಲೀಸರು ಶಂಖ್ಯಾ ವ್ಯಕ್ತಪಡಿಸಿದ್ದಾರೆ ಆದರೆ ಬಾಲಕಿಯರುಂಡಕ್ಕಾಗಿ ಇದೀಗ ಪೊಲೀಸರು ಯಶೋಧ ಕಾರ್ಯವನ್ನು ಮುಂದುವರಿಸಿದ್ದಾರೆ ಎಂದು ತಿಳಿದುಬಂದಿದೆ.