ಬೆಂಗಳೂರು : ಮನೆಯಲ್ಲಿ ಒಂಟಿಯಾಗಿದ್ದ ಮಹಿಳೆಯನ್ನು ದುಷ್ಕರ್ಮಿಗಳು ಕುತ್ತಿಗೆ ಹಿಸುಕಿ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರು ನಗರದ ಕೆಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯ ಕೋನಸಂದ್ರದಲ್ಲಿ ಘಟನೆ ನಡೆದಿದೆ.
ಮನೆಯಲ್ಲಿ ಒಂಟಿಯಾಗಿದ್ದ ದಿವ್ಯ (36)ಎನ್ನುವ ಮಹಿಳೆಯನ್ನು ದುಷ್ಕರ್ಮಿಗಳು ಕೊಲೆಗೈದು ಚಿನ್ನದ ಸರ ಕಳ್ಳತನ ಮಾಡಲಾಗಿದೆ. ಮೃತ ದಿವ್ಯ ಪತಿ ಗುರುಮೂರ್ತಿ ಸಲೂನ್ ನಲ್ಲಿ ಕೆಲಸ ಮಾಡುತ್ತಿದ್ದರು. ಪತಿ ಗುರುಮೂರ್ತಿ ಸಲೂನ್ ಗೆ ಹೋಗಿದ್ದಾಗ ದುಷ್ಕರ್ಮಿಗಳು ಕೊಲೆಗೈದಿದ್ದಾರೆ.ಮರಣೋತ್ತರ ಪರೀಕ್ಷೆಗಾಗಿ ದಿವ್ಯ ಶವವನ್ನು ಆರ್ ಆರ್ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನೆ ಕುರಿತಂತೆ ಕೆಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಲಬುರಗಿ: ಸಿಡಿಲು ಬಡಿದು ರೈತ ಮಹಿಳೆ, ಶ್ವಾನ ಸಾವು
ಮರದ ಕೆಳಗೆ ನಿಂತಿದ್ದ ವೇಳೆ ಸಿಡಿಲು ಬಡಿದು ರೈತ ಮಹಿಳೆ ಹಾಗೂ ಶ್ವಾನ ದುರ್ಮರಣಕ್ಕೀಡಾದ ಘಟನೆ ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಬೋನಸಪೂರ ಗ್ರಾಮದಲ್ಲಿ ನಡೆದಿದೆ.ಸ್ವಪ್ನಾ(48), ಸಿಡಿಲಿಗೆ ಬಲಿಯಾದ ರೈತ ಮಹಿಳೆ. ಮೃತ ಮಹಿಳೆಯ 20 ವರ್ಷದ ಮಗ ಜ್ಞಾನೇಶ್ವರ್ ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.