ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೋ ಪ್ರಕರಣದಲ್ಲಿ ವಕೀಲ ದೇವರಾಜೇಗೌಡ ವಿರುದ್ಧವೂ ದೂರು ದಾಖಲಾಗಿದೆ. ಬಂಧನದ ಭೀತಿ ಎದುರಿಸುತ್ತಿರುವಂತ ಅವರು, ನಾಪತ್ತೆಯಾಗಿದ್ದಾರೆ. ಈ ನಡುವೆಯೂ ಅಜ್ಞಾತ ಸ್ಥಳದಿಂದ ಮೂರು ಆಡಿಯೋ ಕ್ಲಿಪ್ ಗಳನ್ನು ವಕೀಲ ದೇವರಾಜೇಗೌಡ ಬಿಡುಗಡೆ ಮಾಡಿದ್ದಾರೆ.
ಏಪ್ರಿಲ್.23ರಂದು ಹಾಸನ ಪೆನ್ ಡ್ರೈವ್ ಕೇಸ್ ಸಂಬಂಧ ಹಾಸನ ಸೈಬರ್ ಪೊಲೀಸ್ ಠಾಣೆಗೆ ಚುನಾವಣಾ ಏಜೆಂಟ್ ಪೂರ್ಣಚಂದ್ರ ತೇಜಸ್ವಿ ದೂರು ನೀಡಿದ್ದರು. ಈ ದೂರನ್ನು ಆಧರಿಸಿ ಇದೀಗ ಪ್ರಜ್ವಲ್ ಮಾಜಿ ಕಾರು ಚಾಲಕ ಕಾರ್ತಿಕ್ ಹಾಗೂ ವಕೀಲ ದೇವರಾಜೇಗೌಡ ವಿರುದ್ಧ ಕೇಸ್ ದಾಖಲಾಗಿತ್ತು. ಈ ಹಿನ್ನಲೆಯಲ್ಲಿ ಅವರಿಗೆ ನೋಟಿಸ್ ನೀಡಲಾಗಿದೆ.
ಹಾಸನ ಪೆನ್ ಡ್ರೈವ್ ಪ್ರಕರಣದಲ್ಲಿ ಎಸ್ಐಟಿಯಿಂದ ಬಂಧನದ ಭೀತಿಯನ್ನು ಎದುರಿಸುತ್ತಿರುವಂತ ವಕೀಲ ದೇವರಾಜೇಗೌಡ ಅವರು ನಾಪತ್ತೆಯಾಗಿದ್ದರು. ಈಗ ನಾಪತ್ತೆಯಾಗಿ ಅಜ್ಞಾತ ಸ್ಥಳದಲ್ಲಿರುವಂತ ಅವರು, 3 ಆಡಿಯೋ ಕ್ಲಿಪ್ ಬಿಡುಗಡೆ ಮಾಡಿರೋದಾಗಿ ತಿಳಿದು ಬಂದಿದೆ.
ಒಂದರಲ್ಲಿ ಶಿವರಾಮೇಗೌಡ ಜೊತೆಗೆ ಮಾತನಾಡಿರುವಂತ ಆಡಿಯೋ ಇದ್ದರೇ, ಮತ್ತೊಂದರಲ್ಲಿ ಹನಿಟ್ರ್ಯಾಪ್ ಸಂಬಂಧ ಮಹಿಳೆ ಗಂಡನ ಜೊತೆ ಮಾತನಾಡಿರುವಂತ ಆಡಿಯೋವಾಗಿದೆ. ಮಗದೊಂದು ಶಿವರಾಮೇಗೌಡ ಜೊತೆ ಡಿಕೆ ವಿಚಾರ ಮಾತನಾಡುತ್ತಾ, ಎಸ್ಐಟಿ ವಿಚಾರಣೆಯಲ್ಲಿ ಡಿಕೆ ಶಿವಕುಮಾರ್ ಹೆಸರು ಹೇಳದಂತೆ ಶಿವರಾಮೇಗೌಡ ಸೂಚಿಸಿರೋ ಆಡಿಯೋ ತುಣುಕು ಎಂಬುದಾಗಿ ತಿಳಿದು ಬಂದಿದೆ. ಈ ಮೂಲಕ ಪ್ರಜ್ವಲ್ ಅಶ್ಲೀಲ ಕೇಸ್ ಮತ್ತೊಂದು ಟ್ವಿಸ್ಟ್ ಪಡೆದಂತೆ ಆಗಿದೆ.
‘ಪ್ರಜ್ವಲ್ ರೇವಣ್ಣ’ ಅಶ್ಲೀಲ ವೀಡಿಯೋ ಕೇಸ್ : ಬಿಜೆಪಿ ಮುಖಂಡ ದೇವರಾಜೇಗೌಡ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ ದಾಖಲು
ಹಾಸನ:ಪ್ರಜ್ವಲ್ ರೇವಣ್ಣ ಅವರ ವಿಡಿಯೋಗಳ ಬಗ್ಗೆ ಬಿಜೆಪಿ ನಾಯಕತ್ವಕ್ಕೆ ಪತ್ರ ಬರೆದಿದ್ದ ಹಾಸನದ ಬಿಜೆಪಿ ಮುಖಂಡ ದೇವರಾಜೇಗೌಡ ವಿರುದ್ಧ ಲೈಂಗಿಕ ಕಿರುಕುಳ ಮತ್ತು ಎಸ್ಸಿ ಮತ್ತು ಎಸ್ಟಿ (ದೌರ್ಜನ್ಯ ತಡೆ) ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.
ಬಿಜೆಪಿ ಮುಖಂಡ ದೇವರಾಜೇಗೌಡ ಜಾತಿ ನಿಂದನೆ ಮಾಡಿದ್ದಾರೆ ಎಂದು ಆರೋಪಿಸಿ ಕಲಾವಿದರೊಬ್ಬರು ಮಾರ್ಚ್ 31 ರಂದು ಮೊದಲ ದೂರು ದಾಖಲಿಸಿದ್ದರು. ಗೌಡರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಮಹಿಳೆಯೊಬ್ಬರು ಏಪ್ರಿಲ್ 1 ರಂದು ಅದೇ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.ಮಹಿಳೆಯೊಬ್ಬಳಿಗೆ ಲೈಂಗಿಕ ದೌರ್ಜನ್ಯ ನೀಡಿದ ಆರೋಪದಡಿ ಎಫ್ಐಆರ್ ದಾಖಲಾಗಿದೆ. ಹತ್ತು ತಿಂಗಳ ಹಿಂದೆ ಪರಿಚಯವಾಗಿದ್ದ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.
2023 ರ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಹೊಳೆನರಸೀಪುರ ಕ್ಷೇತ್ರದಿಂದ ಸ್ಪರ್ಧಿಸಿ ದೇವರಾಜೇಗೌಡ ಸೋತಿದ್ದರು.
2024 ರ ಲೋಕಸಭಾ ಚುನಾವಣೆಯಲ್ಲಿ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಎನ್ಡಿಎ ಟಿಕೆಟ್ನಲ್ಲಿ ಕಣಕ್ಕಿಳಿಸದಂತೆ ಬಿಜೆಪಿ ಹೈಕಮಾಂಡ್ಗೆ ಎಚ್ಚರಿಕೆ ನೀಡಿದ್ದರು ಎಂದು ವರದಿಯಾದ ನಂತರ ಅವರು ಇತ್ತೀಚೆಗೆ ಸುದ್ದಿಯಾಗಿದ್ದರು.
ಪಕ್ಷದ ನಾಯಕತ್ವಕ್ಕೆ ಬರೆದ ಪತ್ರದಲ್ಲಿ, ಪ್ರಜ್ವಲ್ ಭಾಗಿಯಾಗಿದ್ದಾರೆ ಎನ್ನಲಾದ ಲೈಂಗಿಕ ದೌರ್ಜನ್ಯದ ವೀಡಿಯೊಗಳ ಬಗ್ಗೆ ಅವರು ಮಾಹಿತಿ ನೀಡಿದ್ದರು ಎನ್ನಲಾಗಿದೆ.
ಇತ್ತೀಚೆಗೆ, ಉಪ ಮುಖ್ಯಮಂತ್ರಿ ಮತ್ತು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ವೀಡಿಯೊ ಸೋರಿಕೆಯ ಮಾಸ್ಟರ್ ಮೈಂಡ್ ಎಂದು ಅವರು ಆರೋಪಿಸಿದರು.
ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್ಐಟಿ) ಪಕ್ಷಪಾತದಿಂದ ಕೂಡಿದೆ ಎಂದು ಅವರು ಆರೋಪಿಸಿದರು.
Karnataka Rain: ಇನ್ನೂ ನಾಲ್ಕು ದಿನ ರಾಜ್ಯದಲ್ಲಿ ಧಾರಾಕಾರ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ
ಬೆಂಗಳೂರಲ್ಲಿ ಮತ್ತೊಂದು ಲೈಂಗಿಕ ಕಿರುಕುಳ ಕೇಸ್ : ವಾಟರ್ ಫಿಲ್ಟರ್ ರಿಪೇರಿಗೆ ಬಂದು ಮಹಿಳೆಯನ್ನು ತಬ್ಬಿ ದೌರ್ಜನ್ಯ