ಬೆಂಗಳೂರು : ಬೆಂಗಳೂರಿನಲ್ಲಿ ಕೆಎಎಸ್ ಅಧಿಕಾರಿ ಪತ್ನಿ ಚೈತ್ರ ಗೌಡ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಕಮಿಷನರ್ ಹಾಗೂ ಉತ್ತರ ವಿಭಾಗದ ಡಿಸಿಪಿಗೆ ವಕೀಲರ ಸಂಘವು ಪತ್ರ ಬರೆದಿದ್ದು ಚೈತ್ರ ಪ್ರಕರಣ ಸೂಕ್ತವಾದ ರೀತಿಯಲ್ಲಿ ತನಿಖೆ ಆಗಬೇಕು ಎಂದು ಮನವಿ ಮಾಡಿದ್ದಾರೆ.
ಪ್ರಕರಣ ಕುರಿತಂತೆ ಕಮಿಷನರ್ ಹಾಗೂ ಉತ್ತರ ವಿಭಾಗ ಡಿಸಿಪಿಗೆ ವಕೀಲರ ಸಂಘ ಪತ್ರ ಬರೆದಿದ್ದು, ಚೈತ್ರ ಸಾವು ವಕೀಲರಿಗೆ ಶಾಕ್ ಆಗುವಂತೆ ಮಾಡಿದೆ. ಚೈತ್ರ ವಕೀಲೆ. ಅಷ್ಟೇ ಅಲ್ಲ ಒಳ್ಳೆಯ ಬ್ಯಾಡ್ಮಿಂಟನ್ ಪ್ಲೇಯರ್ ಕೂಡ ಆಗಿದ್ದರು ಎಂದು ಮನವಿ ಪತ್ರದಲ್ಲಿ ಉಲ್ಲೇಖಸಲಾಗಿದೆ.
ಚೈತ್ರದಿಟ್ಟ ಮಹಿಳೆ ಆತ್ಮಹತ್ಯೆಗೆ ಶರಣಾಗುವ ವ್ಯಕ್ತಿಯೇ ಅಲ್ಲ.ಹಾಗಾಗಿ ಚೈತ್ರಾಗೌಡ ಸಾವಿಗೆ ನ್ಯಾಯ ಸಿಗಬೇಕು ಎಂದು ಸೂಕ್ತ ರೀತಿಯಲ್ಲಿ ಪ್ರಕರಣದ ತನಿಖೆ ನಡೆಸುವಂತೆ ವಕೀಲರ ಸಂಘವು ಬೆಂಗಳೂರು ಕಮಿಷನರ್ ಹಾಗೂ ಉತ್ತರ ವಿಭಾಗದ ಡಿಸಿಪಿ ಅವರಿಗೆ ಪತ್ರ ಬರೆದಿದ್ದಾರೆ.
ಇಂದು ಬೆಳಿಗ್ಗೆ 11:00 ಸುಮಾರಿಗೆ ಬೆಂಗಳೂರಿನ ಸಂಜಯ್ ನಗರದಲ್ಲಿ ತಮ್ಮ ನಿವಾಸದಲ್ಲಿ ಫ್ಯಾನಿಗೆ ಸೀರೆಯಿಂದ ನೇಣು ಬಿಗಿದುಕೊಂಡು ವಕೀಲೆ ಚೈತ್ರ ಗೌಡ ಆತ್ಮಹತ್ಯೆಗೆ ಶರಣಾಗಿದ್ದರು ಪೊಲೀಸರು ಸ್ಥಳ ಪರಿಶೀಲನೆ ನಡೆಸುವಾಗ ಮೂರು ತಿಂಗಳ ಹಿಂದೆಯೇ ಆತ್ಮಹತ್ಯೆ ಮಾಡಿಕೊಳ್ಳುವುದರ ಕುರಿತು ಡೆತ್ ನೋಟ್ ಬರೆದಿದ್ದರು ಎಂದು ತಿಳಿದು ಬಂದಿದೆ ಇದೀಗ ಪೊಲೀಸರು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ಮುಂದುವರಿಸಿದ್ದಾರೆ.