ಬೆಂಗಳೂರು : ರಾಜ್ಯದ 150 ಖಾಸಗಿ ಎಂಜಿನಿಯರಿಂಗ್ ಕಾಲೇಜು, ಡೀಮ್ಸ್ ವಿವಿಗಳಲ್ಲಿನ ಎಂಜಿನಿಯರಿಂಗ್ ಕೋರ್ಸ್ ಗಳ ಪ್ರವೇಶಕ್ಕೆ ಇಂದು ಕಾಮೆಡ್-ಕೆ ಪರೀಕ್ಷೆ ನಡೆಯಲಿದೆ.
ಕಂಪ್ಯೂಟರ್ ಆಧಾರಿತ ಪರೀಕ್ಷೆಯಾಗಿದ್ದು, 28 ರಾಜ್ಯಗಳು, 189 ನಗರಗಳು ಮತ್ತು 264 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ. 1.18 ಲಕ್ಷ ಅಭ್ಯರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ. ಕಳೆದ ವರ್ಷಕ್ಕಿಂತ 20 ಸಾವಿರಕ್ಕೂ ಹೆಚ್ಚು ನೋಂದಣಿಯಾಗಿದೆ.
ಅಭ್ಯರ್ಥಿಗಳು ಡೌನ್‌ಲೋಡ್ ಮಾಡಿಕೊಂಡ ಪ್ರವೇಶ ಪತ್ರದ ಜತೆಗೆ ಇತ್ತೀಚಿನ ಎರಡು ಭಾವಚಿತ್ರ, ಗುರುತು ಪತ್ರಗಳನ್ನು ತೆಗೆದುಕೊಂಡು ಹೋಗಬೇಕು ಎಂದು ಕಾಮೆಡ್-ಕೆ ಸೂಚಿಸಿದೆ.
ಬೆಳಿಗ್ಗೆ 8.30 ರಿಂದ 11.30ರವರೆಗೆ ಹಾಗೂ ಮಧ್ಯಾಹ್ನ 1ರಿಂದ 4 ರವರೆಗೆ, ಸಂಜೆ 5.30ರಿಂದ 8.30ರವರೆಗೆ ಮೂರು ಅವಧಿಯಲ್ಲಿ ಪರೀಕ್ಷೆ ನಡೆಸಲಾಗುತ್ತದೆ.