ಬೆಂಗಳೂರು : ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಕೊಪ್ಪಳ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಿಡಿಲಿಗೆ ಇಬ್ಬರು ಸಾವನ್ನಪ್ಪಿದ್ದಾರೆ.
ಉತ್ತರ ಕರ್ನಾಟಕ ಸೇರಿದಂತೆ ರಾಜ್ಯಾದ್ಯಂತ ಮುಂದಿನ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇಂದು ಹಾಸನ,ಕೊಡಗು, ಮೈಸೂರು ಶಿವಮೊಗ್ಗ, ದಾವಣಗೆರೆ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ. ನಾಳೆ ಕಲಬುರಗಿ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದ್ದು, ಮೇ. ೧೪ ರಂದು ಹಾವೇರಿ, ಗದಗ, ಧಾರವಾಗ ಹಾಗೂ ಬೆಳಗಾವಿ ಜಿಲ್ಲೆಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.