ಮೈಸೂರು : ಕಲುಷಿತ ನೀರು ಸೇವಿಸಿ ಒಂದೇ ಗ್ರಾಮದ 25 ಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿರುವ ಘಟನೆ ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಕಡೇಮನುಗನಹಳ್ಳಿಯಲ್ಲಿ ನಡೆದಿದೆ.
ಜೆಜೆಎಂ ಯೋಜನೆಯ ಕಾಮಗಾರಿ ಪೈಲ್ ಲೈನ್ ಒಡೆದು ಕಲುಷಿತ ನೀರು ಸೇರ್ಪಡೆಯಾಗಿ ಕಡೇಮನುಗನಹಳ್ಳಿಯ 25 ಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿದ್ದಾರೆ.
ಅಸ್ವಸ್ಥರಾದ ಗ್ರಾಮದ ಜನರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಗ್ರಾಮಕ್ಕೆ ಆರೋಗ್ಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.