ಹಾಸನ : ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ಸಂಬಂಧ ಪೆನ್ ಡ್ರೈವ್ ಇಟ್ಟುಕೊಂಡಿದ್ದ ಬಿಜೆಪಿಯ ಇಬ್ಬರು ಕಾರ್ಯಕರ್ತರನ್ನು ಎಸ್ ಐಟಿ ವಶಕ್ಕೆ ಪಡೆದುಕೊಂಡಿದೆ.
ಚೇತನ್ ಹಾಗೂ ಲಿಖಿತ್ ಇಬ್ಬರು ಆರೋಪಿಗಳನ್ನು ಎಸ್ ಐಟಿ ಅಧಿಕಾಇರಗಳೂ ವಶಕ್ಕೆ ಪಡೆದುಕೊಂಡಿದ್ದಾರೆ. ಪೆನ್ ಡ್ರೈವ್ ಇಟ್ಟುಕೊಂಡಿದ್ದ ಆರೋಪದಲ್ಲಿ ಇಬ್ಬರನ್ನು ಬಂಧಿಸಲಾಗಿದೆ.
ಒಟ್ಟು 20 ಕ್ಕೂ ಹೆಚ್ಚು ಅಧಿಕಾರಿಗಳ ತಂಡ ಹಾಸನದಲ್ಲಿ ಬೀಡು ಬಿಟ್ಟಿದ್ದು, ವಿಡಿಯೋ ವೈರಲ್ ಆಗಿರುವ ಬಗ್ಗೆ ತನಿಖೆ ನಡೆಸುತ್ತಿದೆ. ಏಪ್ರಿಲ್ 23ರಂದು ಹಾಸನ ಸೈಬಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಎಸ್ ಐಟಿ ತನಿಖೆ ನಡೆಸುತ್ತಿದೆ.