ಬೆಂಗಳೂರು : ಬಿಜೆಪಿಯಲ್ಲಿ 75 ವರ್ಷಕ್ಕೆ ನಿವೃತ್ತಿ ಎಂಬ ನಿಯಮ ಇಲ್ಲ. ನರೇಂದ್ರ ಮೋದಿಯವರೇ ಐದು ವರ್ಷ ಪ್ರಧಾನಿಯಾಗಿ ಇರುತ್ತಾರೆ ಎಂದು ವಿಪಕ್ಷ ನಾಯಕ ಆರ್. ಅಶೋಕ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯಲ್ಲಿ 75 ವರ್ಷಕ್ಕೆ ನಿವೃತ್ತಿ ಎಂಬ ನಿಯಮ ಇಲ್ಲ. ಬಿಜೆಪಿ ಕಾರ್ಯಕಾರಣಿ ಮಂಡಳಿ ಅಂತ ನಿಯಮ ಮಾಡಿಲ್ಲ. ಪ್ರಧಾನಿಯಾಗಿ ನರೇಂದ್ರ ಮೋದಿ ಅವರು ಐದು ವರ್ಷ ಮುಂದುವರೆಯುತ್ತಾರೆ. ಇದರಲ್ಲಿ ಯಾವುದೇ ಗೊಂದಲ ಇಲ್ಲ ಎಂದು ತಿಳಿಸಿದ್ದಾರೆ.
ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ಸಂಬಂಧ ಜೆಡಿಎಸ್ ಹೋರಾಟಕ್ಕೆ ನಮ್ಮ ಬೆಂಬಲ ಇದೆ ಎಂದು ವಿಪಕ್ಷ ನಾಯಕ ಆರ್. ಅಶೋಕ್ ಹೇಳಿದ್ದಾರೆ. ಪ್ರಕರಣವನ್ನು ಸಿಬಿಐಗೆ ವಹಿಸಿ ತನಿಖೆ ಮಾಡಬೇಕು. ಪ್ರಕರಣದಲ್ಲಿ ಕೆಲವರನ್ನು ಅನವಶ್ಯಕವಾಗಿ ಸಿಕ್ಕಿಸಲಾಗುತ್ತಿದೆ ಎಂದಿದ್ದಾರೆ.