ಬೆಂಗಳೂರು: ಕರ್ನಾಟಕದ ಕೆಲ ರಾಜಕಾರಣಿಗಳ ಆಡಿಯೋ-ವಿಡಿಯೋ ಬಿಡುಗಡೆ ಮಾಡಲು ವಕೀಲ ದೇವರಾಜೇಗೌಡ ಪ್ಲಾನ್ ಮಾಡಲು ಮುಂದಾಗಿದ್ದ ಎನ್ನುವ ಮಾಹಿತಿ ಲಭ್ಯವಾಗಿದೆ.
ಹೌದು, ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಕೀಲ ದೇವರಾಜೇಗೌಡಗೆ 14 ದಿನಗಳ ನ್ಯಾಯಾಂಗ ಬಂಧನಲ್ಲಿದ್ದು, ಎಸ್‌ಐಟಿ ವಿಚಾರಣೆ ವೇಳೆಯಲ್ಲಿ ಹಲವು ಮಹತ್ವ ಮಾಹಿತಿಗಳು ಲಭ್ಯವಾಗಿವೆ ಎನ್ನಲಾಗಿದೆ.
ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗದ ಹಿರಿಯೂರು ಬಳಿ ದೇವರಾಜೇಗೌಡನನ್ನು ಬಂಧಿಸಲಾಗಿತ್ತು. ಆದರೆ ಆತ ದೆಹಲಿಗೆ ತೆರಳಿ ಅಲ್ಲಿ ಬಿಜೆಪಿ ನಾಯಕರನ್ನು ಬೇಟಿ ಮಾಡುವುದಕ್ಕೆ ಮುಂದಾಗಿದ್ದರು ಎನ್ನಲಾಗಿದೆ.
ಇನ್ನೂ ದೆಹಲಿ ತೆರಳಿದ ಬಳಿಕ ಅಲ್ಲಿ ಸುದ್ದಿಗೋಷ್ಠಿಯಲ್ಲಿ ಕರ್ನಾಟಕದ ಕೆಲ ರಾಜಕಾರಣಿಗಳ ಆಡಿಯೋ ವಿಡಿಯೋಗಳನ್ನು ಬಿಡುಗಡೆ ಮಾಡುವುದಕ್ಕೆ ಮುಂದಾಗಿದ್ದರು ಎನ್ನುವ ಅನುಮಾನಗಳು ತನಿಖಾ ತಂಡಕ್ಕೆ ಮೂಡಿ ಬಂದಿವೆ ಎನ್ನಲಾಗಿದೆ. ಇನ್ನೂ ದೇವರಾಜೇಗೌಡರನ್ನು ವಿಚಾರಣೆ ನಡೆಸುತ್ತಿರುವ ತನಿಖಾ ತಂಡಕ್ಕೆ ಅವರು ಸರಿಯಾಗಿ ಸಹಕರಿಸುತ್ತಿಲ್ಲ ಎನ್ನುವ ಆರೋಪ ಕೂಡ ಕೇಳಿ ಬಂದಿದೆ.