ಬೆಂಗಳೂರು : ಕೇವಲ ಲೋಕಸಭೆ ಚುನಾವಣೆಗೆ ಅಷ್ಟೇ ಬಿಜೆಪಿ ಜೆಡಿಎಸ್ ಮೈತ್ರಿ ಎಂದು ಹೇಳಲಾಗಿತ್ತು ಆದರೆ ಇದೀಗ ವಿಧಾನ ಪರಿಷತ್ ಚುನಾವಣೆಗೂ ಕೂಡ ಬಿಜೆಪಿ ಜೆಡಿಎಸ್ ಮೈತ್ರಿ ಮುಂದುವರೆದಿದೆ. ಇದೀಗ ವಿಧಾನ ಪರಿಷತ್ ಚುನಾವಣಾ ಟಿಕೆಟ್ ಹಂಚಿಕೆಯ ವಿಚಾರವಾಗಿ ಮಾಜಿ ಸಿಎಂ HD ಕುಮಾರಸ್ವಾಮಿ ಅವರ ಬೇಡಿಕೆಯಂತೆ ಜೆಡಿಎಸ್ ಗೆ ಎರಡು ಸ್ಥಾನ ಕೊಡಲು ಇದೀಗ ಬಿಜೆಪಿ ಒಪ್ಪಿಗೆ ಸೂಚಿಸಿದೆ.
ದಕ್ಷಿಣ ಶಿಕ್ಷಕರ ಕ್ಷೇತ್ರ ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರ ಇದೀಗ ಜೆಡಿಎಸ್ ಪಾಲಾಗಿದೆ. ಈ ಕುರಿತಂತೆ ಎಚ್ ಡಿ ಕುಮಾರಸ್ವಾಮಿ ದೂರವಾಣಿ ಮೂಲಕ ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ದ ಹಾಗೂ ಬಿವೈ ವಿಜಯೇಂದ್ರ ಜೊತೆಗೆ ಮಾತುಕತೆ ನಡೆಸಿದರು. ನಿನ್ನೆ ಇ.ಸಿ ನಿಂಗರಾಜು ಹೆಸರನ್ನು ಬಿಜೆಪಿ ಹೈಕಮಾಂಡ್ ಘೋಷಿಸಿತ್ತು.6 ಕ್ಷೇತ್ರಗಳಲ್ಲಿ ಪೈಕಿ 5 ಕ್ಷೇತ್ರಗಳ ಅಭ್ಯರ್ಥಿ ಹೆಸರನ್ನು ಬಿಜೆಪಿ ಘೋಷಣೆ ಮಾಡಿತ್ತು. ಹೀಗಾಗಿ ಒಟ್ಟು ಎರಡು ಕ್ಷೇತ್ರಗಳ ಬಗ್ಗೆ ಜೆಡಿಎಸ್ ನಿರೀಕ್ಷೆಯಲ್ಲಿತ್ತು ನಿರೀಕ್ಷೆಯಂತೆ ಇದೀಗ ಜೆಡಿಎಸ್ ಗೆ ಎರಡು ಕ್ಷೇತ್ರ ಬಿಟ್ಟುಕೊಡಲು ಬಿಜೆಪಿ ಸಮ್ಮತಿ ಸೂಚಿಸಿದೆ.
ಹೌದು ದಕ್ಷಿಣ ಶಿಕ್ಷಕರ ಕ್ಷೇತ್ರ ಜೆಡಿಎಸ್ ಗೆ ಬಿಟ್ಟುಕೊಡಲು ಬಿಜೆಪಿ ಸಮ್ಮತಿ ಸೂಚಿಸಲಾಗಿದೆ. ಈಗಾಗಲೇ ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ಟಿಕೆಟ್ ಕೂಡ ಘೋಷಣೆಯಾಗಿದೆ ಅಭ್ಯರ್ಥಿಯಾಗಿ ಇ.ಎಸ್ ನಿಂಗರಾಜು ಹೆಸರನ್ನು ಗುರುತಿಸಿದ್ದ ಬಿಜೆಪಿ, ಒಟ್ಟು ಆರು ಕ್ಷೇತ್ರದ ಪೈಕಿ ಐದು ಕ್ಷೇತ್ರಗಳಲ್ಲಿ ಅಭ್ಯರ್ಥಿ ಹೆಸರು ಘೋಷಿಸಿತ್ತು.ಹೀಗಾಗಿ ಘೋಷಣೆ ಬಳಿಕ ಬಿಜೆಪಿ ರಾಷ್ಟಿಯ ಅಧ್ಯಕ್ಷ ಜೆಪಿ ನಡ್ದ ಹಾಗೂ ರಾಜ್ಯ ಬಿಜೆಪಿ ಅಧ್ಯಕ್ಷ ಬಿವೈ ವಿಜಯೇಂದ್ರ ಜೊತೆಗೆ ಹೆಚ್ ಡಿ ಕುಮಾರಸ್ವಾಮಿ ಚರ್ಚಿಸಿದ್ದಾರೆ. ಎರಡು ಕ್ಷೇತ್ರಗಳ ನಿರೀಕ್ಷೆಯಲ್ಲಿದ್ದ ಜೆಡಿಎಸ್ ಎಚ್ ಡಿ ಕುಮಾರಸ್ವಾಮಿ ಬೇಡಿಕೆಗೆ ಜೆಪಿ ನಡ್ದ ವಿಜಯೆಂದ್ರ ಸಮ್ಮತಿ ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ.