ಬೀದರ : ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ವಾಹನದ ಮೇಲೆ ಖಚಿತ ಮಾಹಿತಿಯ ಮೇರೆಗೆ ಬೆಂಗಳೂರಿನ NCB ಅಧಿಕಾರಿಗಳು ಹಾಗೂ ಬೀದರ್ ಪೊಲೀಸರು ದಾಳಿ ಮಾಡಿ ಸುಮಾರು 15 ಕೋಟಿಗೂ ಮೌಲ್ಯದ ಅಧಿಕ ಗಾಂಜಾವನ್ನು ಇದೀಗ ಬೀದರ್ ಜಿಲ್ಲೆಯ ಔರಾದ ತಾಲೂಕಿನ ವನಮಾರಪಳ್ಳಿ ಬಳಿ ಜಪ್ತಿ ಮಾಡಿಕೊಂಡಿದ್ದಾರೆ.
ಜಿಲ್ಲೆಯ ಔರಾದ ತಾಲೂಕಿನ ವನಮಾರಪಳ್ಳಿ ಬಳಿ NCB ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದಾರೆ. ಒಡಿಶಾದಿಂದ ಮಹಾರಾಷ್ಟ್ರಕ್ಕೆ ಅಕ್ರಮವಾಗಿ ಗಾಂಜಾ ಸಾಗಿಸುತ್ತಿದ್ದರು. ಹಾಗಾಗಿ ಖಚಿತವಾದಂತ ಮಾಹಿತಿಯನ್ನು ಪಡೆದುಕೊಂಡು ಬೆಂಗಳೂರಿನ ಎನ್ ಸಿ ಬಿ ಅಧಿಕಾರಿಗಳು ಹಾಗೂ ಪೊಲೀಸರಿಂದ ಈ ಒಂದು ಕಾರ್ಯಾಚರಣೆ ನಡೆಸಲಾಗಿದೆ. ಔರಾದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.