ಮಡಿಕೇರಿ : ಸುಮಾರು 30 ವರ್ಷಗಳ ಹಿಂದೆ ತೀರಿ ಹೋದ ಹೆಣ್ಣು ಮಗುವಿಗೆ ಅದೇ ಜಾತಿಯ ಬೇರೆ ಗೋತ್ರದ 30 ವರ್ಷದ ಹಿಂದೆ ತೀರಿ ಹೋದ ಗಂಡು ಮಗುವಿನ ಮನೆಯವರು ಪ್ರೇತ ಮದುವೆ ಮಾಡಿಸಲು ತಯಾರಿದ್ದರೆ ಸಂಪ ರ್ಕಿಸಿ ಎಂಬ ಜಾಹೀರಾತು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.
ದಿನಪತ್ರಿಕೆಯೊಂದರಲ್ಲಿ ಪ್ರೇತ ಮದುವೆಗೆ ವರ ಬೇಕಿದೆ ಎನ್ನುವ ಜಾಹೀರಾತು ಪ್ರಕಟವಾಗಿದ್ದು, ಸದ್ಯ ವೈರಲ್ ಆಗುತ್ತಿದೆ. ಬಂಗೇರ ಬದಿಯ 30 ವರ್ಷಗಳ ಹಿಂದೆ ತೀರಿ ಹೋದ ಹೆಣ್ಣು ಮಗುವಿಗೆ ಅದೇ ಜಾತಿಯ ಇತರ ಬದಿಯ 30 ವರ್ಷಗಳ ಹಿಂದೆ ತೀರಿಹೋದ ಗಂಡಿನ ಮನೆಯವರು ಪ್ರೇತ ಮದುವೆ ಮಾಡಿಸಲು ತಯಾರಿದ್ದರೆ, ದಯವಿಟ್ಟು ಸಂಪರ್ಕಿಸಿ” ಎಂದು ಜಾಹೀರಾತು ನೀಡಿದ್ದಾರೆ.
ಪುತ್ತೂರಿನ ನಿವಾಸಿಯೊಬ್ಬರ ಮನೆಯಲ್ಲಿ ಸುಮಾರು 30 ವರ್ಷದ ಹಿಂದೆ ಒಂದು ತಿಂಗಳ ಹಸುಗೂಸು ಮೃತಪಟ್ಟಿತ್ತು. ಇತ್ತೀಚೆನ ಕೆಲವು ವರ್ಷದಲ್ಲಿ ಅವರ ಮನೆ-ಕುಟುಂಬದಲ್ಲಿ ಅಕಾಲಿಕ ಘಟನೆಗಳು ಸಂಭವಿಸತೊಡಗಿತ್ತು. ಈ ಬಗ್ಗೆ ಅವಲೋಕಿಸಿದಾಗ ಪ್ರೇತ ಬಾಧೆಯ ಬಗ್ಗೆ ತಿಳಿದುಕೊಂಡಿದ್ದು, ಇದೀಗ ಪ್ರೇತ ಮದುವೆ ಮದುವೆ ಮಾಡಲು ಹೊರಟಿದ್ದಾರೆ.