ಬೆಂಗಳೂರು : ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ನಿವಾಸಕ್ಕೆ ಬಿಜೆಪಿ ಶಾಸಕ ಶಿವರಾಂ ಹೆಬ್ಬಾರ್ ಅವರು ಇಂದು ಭೇಟಿ ನೀಡಿದ್ದು, ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ.
ಬೆಂಗಳೂರಿನ ಸದಾಶಿವನಗರದಲ್ಲಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ನಿವಾಸಕ್ಕೆ ಯಲ್ಲಾಪುರ ಕ್ಷೇತ್ರದ ಬಿಜೆಪಿ ಶಾಸಕ ಶಿವರಾಂ ಹೆಬ್ಬಾರ್ ಭೇಟಿ ನೀಡಿದ್ದು, ಮಹತ್ವದ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ. ಶಾಸಕ ಶಿವರಾಂ ಹೆಬ್ಬಾರ್ ಜೊತೆಗೆ ಮಾಲೀಕಯ್ಯ ಗುತ್ತೇದಾರ್, ಶಾಸಕ ಗಣೇಶ್ ಅವರೂ ಸಹ ಭೇಟಿ ನೀಡಿದ್ದಾರೆ.