ಬೆಂಗಳೂರು : ಇಂದು ಮಹಿಳೆ ಕಿಡ್ನ್ಯಾಪ್ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್.ಡಿ ರೇವಣ್ಣ ಸಲ್ಲಿಸಿದ್ದಂತ ಜಾಮೀನು ಅರ್ಜಿಯ ವಿಚಾರಣೆಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯ ನಡೆಸಿತು. ವಾದ-ಪ್ರತಿವಾದ ಆಲಿಸಿದಂತ ನ್ಯಾಯಪೀಠವು, ವಿಚಾರಣೆಯನ್ನು ಮಧ್ಯಾಹ್ನ 12.15 ಕ್ಕೆ ಮುಂದೂಡಿಕೆ ಮಾಡಿದೆ.
ಮೈಸೂರಿನ ಕೆ ಆರ್ ನಗರ ಠಾಣೆಯಲ್ಲಿ ಅಪಹರಣಕ್ಕೆ ಒಳಗಾಗಿದ್ದ ಮಹಿಳೆಯ ಮಗ ಇತ್ತೀಚಿಗೆ ನನ್ನ ತಾಯಿ ಕಾಣೆಯಾಗಿದ್ದಾಳೆ ಹುಡುಕಿ ಕೊಡಿ ಎಂದು ದೂರು ಸಲ್ಲಿಸಿದ್ದ. ಈ ಪ್ರಕರಣದಲ್ಲಿ HD ರೇವಣ್ಣ ಹಾಗೂ ಭವಾನಿ ರೇವಣ್ಣ ಸಂಬಂಧಿಯಾಗಿರುವ ಸತೀಶ್ ಬಾಬು ವಿರುದ್ಧ FIR ದಾಖಲಾಗಿತ್ತು.
ಕಳೆದ ಎರಡು ದಿನಗಳ ಹಿಂದೆ ಈ ಒಂದು ಪ್ರಕರಣದಲ್ಲಿ ಶಾಸಕ HD ರೇವಣ್ಣ ಅವರನ್ನು ಬಂಧಿಸಲಾಗಿತ್ತು.ಬಂಧನಕ್ಕೂ ಮುನ್ನ ಅವರು ನಿರೀಕ್ಷಣಾ ಜಾಮೀನನ್ನು ಸಲ್ಲಿಸಿದ್ದರು. ಆದರೆ ಅದನ್ನು ಕೋರ್ಟ್ ಅದನ್ನು ಮುಕ್ತಾಯಗೊಳಿಸಿದ್ದು ಇದೀಗ ಬಂಧನದಲ್ಲಿರುವ ರೇವಣ್ಣ ಅವರು ಮತ್ತೆ ಜಾಮೀನಿಗಾಗಿ ಕೋರ್ಟಿಗೆ ಅರ್ಜಿ ಸಲ್ಲಿಸಿದ್ದರು