ನವದೆಹಲಿ: ಅಬಕಾರಿ ನೀತಿ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಅರವಿಂದ್ ಕೇಜ್ರಿವಾಲ್ ಅವರನ್ನು ದೆಹಲಿ ಮುಖ್ಯಮಂತ್ರಿ ಹುದ್ದೆಯಿಂದ ತೆಗೆದುಹಾಕುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ.
ಅಬಕಾರಿ ನೀತಿ ಪ್ರಕರಣದಲ್ಲಿ ಬಂಧನಕ್ಕೊಳಗಾದ ಕಾರಣ ಅರವಿಂದ್ ಕೇಜ್ರಿವಾಲ್ ಅವರನ್ನು ದೆಹಲಿ ಮುಖ್ಯಮಂತ್ರಿ ಹುದ್ದೆಯಿಂದ ತೆಗೆದುಹಾಕುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ತಿರಸ್ಕರಿಸಿದೆ. “ಅದನ್ನು ಕೇಳಲು ಯಾವುದೇ ಕಾನೂನು ಹಕ್ಕಿಲ್ಲ” ಎಂದು ಸುಪ್ರೀಂ ಕೋರ್ಟ್ ಹೇಳಿದೆ.