ಹಾಸನ : ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಪ್ರಕರಣ ಸಂಬಂಧ ಎಸ್ ಐಟಿ ಸ್ಥಳ ಮಹಜರು ಬಳಿಕ ಇದೀಗ ಎಫ್ ಎಸ್ ಎಲ್ ತಂಡ ಪ್ರಜ್ವಲ್ ರೇವಣ್ಣ ನಿವಾಸದಲ್ಲಿ ತಪಾಸಣೆ ನಡೆಸುತ್ತಿದೆ.
ಹಾಸನದ ಆರ್. ಸಿ ರಸ್ತೆಯಲ್ಲಿರುವ ಪ್ರಜ್ವಲ್ ರೇವಣ್ಣ ನಿವಾಸದಲ್ಲಿ ಎಫ್ ಎಸ್ ಎಲ್ ತಂಡದಿಂದ ಪರಿಶೀಲನೆ ನಡೆಸಲಾಗುತ್ತಿದೆ. ಎಎಸ್ ಪಿ ವೆಂಕಟನಾಯ್ಡು ನೇತೃತ್ವದಲ್ಲಿ ಪ್ರಜ್ವಲ್ ರೇವಣ್ಣ ನಿವಾಸದಲ್ಲಿ ತಪಾಸಣೆ ನಡೆಸಲಾಗುತ್ತಿದೆ.
ಈಗಾಗಲೇ ಸಂತ್ರಸ್ತೆ ಮಹಿಳೆಯೊಂದಿಗೆ ಪ್ರಜ್ವಲ್ ರೇವಣ್ಣ ನಿವಾಸದಲ್ಲಿ ಎಸ್ ಐಟಿ ಅಧಿಕಾರಿಗಳು ಸ್ಥಳ ಮಹಜರು ಮಾಡಲಾಗಿತ್ತು. ಇದೀಗ ಎಫ್ ಎಸ್ ಎಲ್ ತಂಡದಿಂದ ತಪಾಸಣೆ ನಡೆಸಲಾಗುತ್ತಿದೆ. ಹೀಗಾಗಿ ಪ್ರಜ್ವಲ್ ನಿವಾಸದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.