ಬೆಂಗಳೂರು: ವಿಪಕ್ಷ ನಾಯಕ ಆರ್.ಅಶೋಕ್ ಅವರು ಮಾತನಾಡಿ, ಸಿದ್ದರಾಮಯ್ಯ ಸೇರಿ ಯಾರೇ ಪ್ರಚಾರ ಮಾಡಿದರೂ ಕಾಂಗ್ರೆಸ್ಸಿಗೆ ಇಲ್ಲಿ ಉಳಿಗಾಲ ಇಲ್ಲ ಎಂದು ಅಭಿಪ್ರಾಯಪಟ್ಟರು.
ವೈ.ಎ.ನಾರಾಯಣಸ್ವಾಮಿ ಮತ್ತು ಅ.ದೇವೇಗೌಡರ ಗೆಲುವು ನಿಶ್ಚಿತ. ವೈ.ಎ.ನಾರಾಯಣಸ್ವಾಮಿ ಅವರು ಮಾಡಿರುವ ಕೆಲಸ, ಅವರ ಸಂಪರ್ಕ, ನಿರಂತರ ಸೇವೆ ಗಮನಿಸಿ ಅವರ ಆಶೀರ್ವಾದ ಖಚಿತ; ಬೆಂಗಳೂರಿನಲ್ಲಿ ಅ.ದೇವೇಗೌಡರು ಮತದಾರರ ಉತ್ತಮ ಒಲವನ್ನು ಹೊಂದಿದ್ದಾರೆ ಎಂದು ತಿಳಿಸಿದರು. ಎರಡೂ ಪಕ್ಷಗಳು ಸಮರ್ಥ ಅಭ್ಯರ್ಥಿಗಳನ್ನು ಕಣಕ್ಕಿಳಿಸಿವೆ ಎಂದು ಅವರು ನುಡಿದರು.
ವೈ.ಎ.ನಾರಾಯಣಸ್ವಾಮಿ ಮತ್ತು ಅ.ದೇವೇಗೌಡ ಅವರು ನಾಮಪತ್ರ ಸಲ್ಲಿಸಿದರು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ವಿಪಕ್ಷ ನಾಯಕ ಆರ್.ಅಶೋಕ್ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಡಿಸಿಎಂ ಗೋವಿಂದ ಕಾರಜೋಳ, ಡಾ.ಅಶ್ವತ್ಥನಾರಾಯಣ, ರಾಜ್ಯಸಭಾ ಸದಸ್ಯ ಲೆಹರ್ ಸಿಂಗ್, ಸಂಸದ ಪಿ.ಸಿ.ಮೋಹನ್, ಶಾಸಕ ಸುರೇಶ್ ಗೌಡ, ಮುಖಂಡ ಲಕ್ಷ್ಮೀನಾರಾಯಣ್, ಮಾಜಿ ಶಾಸಕ ಎಂ.ಕೃಷ್ಣರೆಡ್ಡಿ ಮತ್ತಿತರ ಮುಖಂಡರು ಹಾಜರಿದ್ದರು.
Viral video : ಮತದಾನಕ್ಕಾಗಿ ಸರತಿ ಸಾಲಲ್ಲಿ ನಿಂತ ‘ಮತದಾರ’ನಿಗೆ ಆಂಧ್ರ ಸಿಎಂ ಜಗನ್ ಪಕ್ಷದ ‘ಶಾಸಕ’ನಿಂದ ಕಪಾಳಮೋಕ್ಷ
ವಿಧಾನಪರಿಷತ್ ಚುನಾವಣೆಯಲ್ಲಿ ನಮ್ಮೆಲ್ಲ ಅಭ್ಯರ್ಥಿಗಳ ಗೆಲುವು ಖಚಿತ: ಬಿ.ವೈ.ವಿಜಯೇಂದ್ರ