ಬೆಂಗಳೂರು: ಕೆಲ ತಾಂತ್ರಿಕ ಕಾರಣದಿಂದಾಗಿ ಬಿಎಂಟಿಸಿ ಬಸ್ಸುಗಳಲ್ಲಿ ಕ್ಯೂ ಆರ್ ಕೋಡ್ ಮೂಲಕ ಟಿಕೆಟ್ ಖರೀದಿ ವ್ಯವಸ್ಥೆಯಲ್ಲಿ ವ್ಯತ್ಯಯ ಉಂಟಾಗಿತ್ತು. ಈಗ ತಾಂತ್ರಿಕ ಸಮಸ್ಯೆ ಸರಿಪಡಿಸಿದ ನಂತ್ರ, ಪುನರಾರಂಭಿಸಲಾಗಿದೆ.
ಈ ಕುರಿತಂತೆ ಬಿಎಂಟಿಸಿಯು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಕೆನರಾ ಬ್ಯಾಂಕ್ ಪಾವತಿ ತಂತ್ರಾಂಶದಲ್ಲಿನ ಸುರಕ್ಷತೆ ಮತ್ತು ಭದ್ರತಾ ವೈಶಿಷ್ಟ್ಯತೆಯನ್ನು ಉನ್ನತಿಕರಿಸುವ ಸಂಬಂಧ ಬಿಎಂಟಿಸಿ ಬಸ್‌ಗಳಲ್ಲಿ QR ಕೋಡ್ ಕಾರ್ಯಚಟುವಟಿಕೆಯು ತಾತ್ಕಾಲಿಕವಾಗಿ ಸ್ಥಗಿತವಾಗಿತ್ತು ಎಂದಿದೆ.
ಪ್ರಸ್ತುತ ಸದರಿ ನ್ಯೂನ್ಯತೆಯನ್ನು ಸರಿಪಡಿಸಲಾಗಿರುತ್ತದೆ. ಈಗ ಪ್ರಯಾಣಿಕರು ಕ್ಯೂಆರ್ / ಯಪಿಐ ತಂತ್ರಾಂಶದ ಮೂಲಕ ಹಣ ಪಾವತಿಸಿ ಟಿಕೆಟ್ ಪಡೆಯಬಹುದಾಗಿರುತ್ತದೆ ಎಂಬುದಾಗಿ ತಿಳಿಸಿದೆ.
BREAKING: ಕೆ.ಆರ್ ನಗರ ‘ಸಂತ್ರಸ್ತೆ ಕಿಡ್ನ್ಯಾಪ್’ ಕೇಸ್: ಮೂವರು ಆರೋಪಿಗಳಿಗೆ ನ್ಯಾಯಾಂಗ ಬಂಧನ