ಮೈಸೂರು : ಶಾರ್ಟ್ ಸರ್ಕ್ಯೂಟ್ ನಿಂದಾಗಿ ಮೈಸೂರಿನಲ್ಲಿ ತಡರಾತ್ರಿ ಅಗರಬತ್ತಿ ಫ್ಯಾಕ್ಟರಿಯಲ್ಲಿ ಬೆಂಕಿ ಅವಘಡ ಸಂಭವಿಸಿರುವ ಘಟನೆ ನಡೆದಿದೆ.
ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ರಫೀಕ್ ಎಂಬುವವರ ಅಗರಬತ್ತಿ ಫ್ಯಾಕ್ಟರಿಯಲ್ಲಿ ಈ ಘಟನೆ ನಡೆದಿದೆ. ಅಗ್ನಿ ಅವಘಡದಲ್ಲಿ ಲಕ್ಷಾಂತರ ರೂಪಾಯಿ ವಸ್ತುಗಳು ಬೆಂಕಿಗಾಹುತಿಯಾಗಿವೆ.
ಶಾರ್ಟ್ ಸರ್ಕ್ಯೂಟ್ ನಿಂದಾಗಿ ಘಟನೆ ಸಂಭವಿಸಿದೆ ಎನ್ನಲಾಗಿದ್ದು, ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಅಗರಬತ್ತಿ ಕಾರ್ಖಾನೆಯ ವಸ್ತುಗಳು ಬೆಂಕಿಯಲ್ಲಿ ಸುಟ್ಟು ಭಸ್ಮವಾಗಿವೆ.