ಬೆಂಗಳೂರು : ಮಹಿಳೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಜಿಲ್ಲೆಯ ಹಳೆ ನರಸೀಪುರ ಜೆಡಿಎಸ್ ಶಾಸಕ ಎಚ್ ಡಿ ರೇವಣ್ಣ ಅವರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಷರತ್ತು ಬದ್ಧ ಜಾಮೀನು ಮಂಜೂರು ಮಾಡಲಾಗಿದ್ದು, ಇಂದು ಸಂಜೆ ಜೈಲಿನಿಂದ ಬಿಡುಗಡೆಗೆ ಆದೇಶ ಹೊರಡಿಸಿದೆ.
ಇಂದು ಕೋರ್ಟ್ ನಲ್ಲಿ ನ್ಯಾಯಾಧೀಶರಿಂದ ಬಿಡುಗಡೆ ಆದೇಶ ಬಂದಿದ್ದು, ಇಂದು ಸಂಜೆ ಬಳಿಕ ಹೆಚ್ ಡಿ ರೇವಣ್ಣಗೆ ಬಿಡುಗಡೆ ಭಾಗ್ಯ ದೊರೆಯಲಿದೆ.
ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್ ಅವರು ಈ ಕುರಿತಂತೆ ಆದೇಶ ಹೊರಡಿಸಿದ್ದು, ಎಚ್ ಡಿ ರೇವಣ್ಣ ಅವರು 5 ಲಕ್ಷ ಬಾಂಡ್ ನೀಡಬೇಕು, ಸಾಕ್ಷಾಧಾರವನ್ನು ನಾಶಪಡಿಸಬಾರದು, ಎಸ್‌ಐಟಿ ತನಿಖೆಗೆ ಸಹಕರಿಸಬೇಕು ಎಂದು ಷರತ್ತು ಬದ್ಧ ಜಾಮೀನು ನೀಡಲಾಗಿದೆ.