ವಾರಣಾಸಿ : ವಾರಣಾಸಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.
ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಗಂಗಾ ಮಾತೆಗೆ ಪೂಜೆ ಸಲ್ಲಿಸಿ ವಾರಣಾಸಿಯ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ವಾರಣಾಸಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಈ ವೇಳೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿದಂತೆ ಹಲವು ನಾಯಕರು ಸಾಥ್ ನೀಡಿದ್ದಾರೆ.
#WATCH | Prime Minister Narendra Modi files nomination from Varanasi Lok Sabha seat for #LokSabhaElections2024
Uttar Pradesh CM Yogi Adityanath is also present on the occasion. pic.twitter.com/woWNPgqdiG
— ANI (@ANI) May 14, 2024
2019 ರ ಚುನಾವಣೆಯಲ್ಲಿ, ಪಿಎಂ ಮೋದಿ ವಾರಣಾಸಿಯನ್ನು 6,74,664 ಕ್ಕೂ ಹೆಚ್ಚು ಮತಗಳನ್ನು ಮತ್ತು ಶೇಕಡಾ 63.6 ರಷ್ಟು ಮತಗಳನ್ನು ಪಡೆಯುವ ಮೂಲಕ ಗಮನಾರ್ಹ ಅಂತರದಿಂದ ಗೆದ್ದರು. 2014ರಲ್ಲಿ ಮೋದಿ ಅವರು ವಾರಣಾಸಿ ಜೊತೆಗೆ ಗುಜರಾತ್ ನ ವಡೋದರಾದಿಂದ ಸ್ಪರ್ಧಿಸಿದ್ದರು.
ಪ್ರಧಾನಿ ಮೋದಿ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿ ಯಾರು?
ವಾರಣಾಸಿಯಲ್ಲಿ ಮೋದಿ ವಿರುದ್ಧ ಉತ್ತರ ಪ್ರದೇಶ ಕಾಂಗ್ರೆಸ್ ಮುಖ್ಯಸ್ಥ ಅಜಯ್ ರಾಯ್ ಸ್ಪರ್ಧಿಸುತ್ತಿರುವುದು ಇದು ಮೂರನೇ ಬಾರಿ. ವಾರಣಾಸಿಯಲ್ಲಿ ಜೂನ್ 1 ರಂದು ಏಳನೇ ಮತ್ತು ಅಂತಿಮ ಹಂತದ ಮತದಾನ ನಡೆಯಲಿದೆ.