ಬೆಂಗಳೂರು : ಮಹಿಳೆ ಕಿಡ್ನ್ಯಾಪ್ ಕೆಎಸ್ ಅಲ್ಲಿ ಬಂಧನವಾಗಿದ್ದ ಹಾಸನ ಜಿಲ್ಲೆಯ ಹೊಳೆನರಸೀಪುರ ಜೆಡಿಎಸ್ ಶಾಸಕ ಎಚ್ ಡಿ ರೇವಣ್ಣ ಅವರು ಇಂದು ಬೆಂಗಳೂರಿನ ಪರಪ್ಪನ ಅಗ್ರಹಾರದಿಂದ ಬಿಡುಗಡೆಯಾಗಿ ನೇರವಾಗಿ ಬೆಂಗಳೂರಿನ ಪದ್ಮನಾಭನಗರದಲ್ಲಿರುವ ತಮ್ಮ ತಂದೆ ಎಚ್ ಡಿ ದೇವೇಗೌಡರ ನಿವಾಸಕ್ಕೆ ತೆರಳಿದರು.
ಕಳೆದ ಹತ್ತು ದಿನಗಳಿಂದ ಅವರು ಮಹಿಳೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರದಲ್ಲಿ ಜೈಲುವಾಸ ಅನುಭವಿಸಿದ್ದರು ನಿನ್ನೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಎಚ್ ಡಿ ರೇವಣ್ಣ ಅವರಿಗೆ ಶರತ್ತು ಬದ್ಧ ಜಾಮೀನು ನೀಡಿ ಆದೇಶ ಹೊರಡಿಸಿತು. ಅದರಂತೆ ಇದೀಗ ಇಂದು ಮಧ್ಯಾಹ್ನ ಶಾಸಕ ಎಚ್ ಡಿ ರೇವಣ್ಣ ಅವರು ಜೈಲಿನಿಂದ ಬಿಡುಗಡೆಯಾದರು.
ಜೈಲಿಂದ ಹೊರಗಡೆ ಬರುತ್ತಿದ್ದಂತೆ ಅವರ ಬೆಂಬಲಿಗರು ಕಾರ್ಯಕರ್ತರು ಹಾಗೂ ಅಭಿಮಾನಿಗಳು ಘೋಷಣೆ ಕೂಗಿದರು ಈ ವೇಳೆ ರೇವಣ್ಣ ಅವರ ಕಾರ್ಯಕರ್ತರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಟ್ಟರು ನಂತರ
ರೇವಣ್ಣ ಅವರು ಕಾಲಿನಲ್ಲಿ ಬೆಂಗಳೂರಿನ ಪದ್ಮನಾಭ ನಗರದಲ್ಲಿರುವ ತಮ್ಮ ತಂದೆ ಎಚ್ ಡಿ ದೇವೇಗೌಡ ಅವರ ನಿವಾಸಕ್ಕೆ ಹೇಳಿದ್ದಾರೆ ಎಂದು ತಿಳಿದುಬಂದಿದೆ.
ಬೆಂಗಳೂರಿನ ಪದ್ಮನಾಭನಗರದಲ್ಲಿರುವ ಎಚ್ ಡಿ ದೇವೇಗೌಡ ನಿವಾಸಕ್ಕೆ ಇದೀಗ ಎಚ್ ಡಿ ರೇವಣ್ಣ ಅವರು ತೆರಳಿದ್ದು, ಜೈಲಿನಿಂದ ನೇರವಾಗಿ ತೆರಳಿದ್ದಾರೆ. ದೇವೇಗೌಡರ ಜೊತೆ ರೇವಣ್ಣ ಅವರು ಸಮಲೋಚನೆ ನಡೆಸಲಿದ್ದಾರೆ ಎಂದು ಹೇಳಲಾಗುತ್ತಿದೆ.