ಹಾಸನ: ಸಂಸದ ಪ್ರಜ್ವಲ್ ರೇವಣ್ಣ ಅವರ ಪೆನ್ ಡ್ರೈವ್ ಹಂಚಿಕೆ ಕೇಸ್ ಸಂಬಂಧ ಇಬ್ಬರು ಆರೋಪಿಗಳು ಸಲ್ಲಿಸಿದ್ದಂತ ಜಾಮೀನು ಅರ್ಜಿಯನ್ನು ನ್ಯಾಯಾಲಯವು ವಜಾಗೊಳಿಸಿದೆ.
ಇಂದು ಹಾಸನ ಸಂಸದ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಹಂಚಿಕೆ ಪ್ರಕರಣ ಸಂಬಂಧ ಆರೋಪಿಗಳಾದಂತ ಲಿಖಿತ್ ಗೌಡ ಹಾಗೂ ಚೇತನ್ ಎಂಬುವರು ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರು.
ಹಾಸನ ಪೆನ್ ಡ್ರೈವ್ ಹಂಚಿಕೆ ಕೇಸ್ ಸಂಬಂಧ ಆರೋಪಿಗಳು ಸಲ್ಲಿಸಿದ್ದಂತ ಜಾಮೀನು ಅರ್ಜಿಯನ್ನು ಹಾಸನದ ಒಂದನೇ ಅಧಿಕ ಹಿರಿಯ ಸಿವಿಲ್ ನ್ಯಾಯಾಲಯದ ನ್ಯಾಯಾಧೀಶರು ವಿಚಾರಣೆ ನಡೆಸಿದರು. ಬಳಿಕ ಪ್ರಕರಣದಲ್ಲಿ ಇಬ್ಬರು ಆರೋಪಿಗಳಾದಂತ ಲಿಖಿತ್ ಗೌಡ ಹಾಗೂ ಚೇನ್ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ.
ಅಂದಹಾಗೇ ಪೊಲೀಸರು ಮೇ.12ರಂದು ಪೆನ್ ಡ್ರೈವ್ ಹಂಚಿಕೆ ಕೇಸಲ್ಲಿ ಲಿಖಿತ್ ಗೌಡ ಹಾಗೂ ಚೇತನ್ ನನ್ನು ಬಂಧಿಸಿದ್ದರು. ಆ ಬಳಿಕ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಅವರಿಗೆ ಕೋರ್ಟ್ ನ್ಯಾಯಾಂಗ ಬಂಧನ ವಿಧಿಸಿತ್ತು.
ಬಾಗಲಕೋಟೆ : ಕ್ಷುಲ್ಲಕ ಕಾರಣಕ್ಕೆ ಅಪ್ಪ-ಮಗನ ಮಧ್ಯ ಗಲಾಟೆ : ಕೊಡಲಿಯಿಂದ ಮಗನ ಹತ್ಯೆಗೈದ ತಂದೆ
SSLC ಪರೀಕ್ಷೆಯಲ್ಲಿ ರಾಜ್ಯಕ್ಕೇ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗೆ 5 ಲಕ್ಷ ರೂ ನೀಡಿದ ಡಿಸಿಎಂ ಡಿ.ಕೆ ಶಿವಕುಮಾರ್