ಬೆಂಗಳೂರು : ಮಹಿಳೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ 10 ದಿನಗಳ ಕಾಲ ಜೈಲುವಾಸ ಅನುಭವಿಸಿ ಎಂದು ಜೆಡಿಎಸ್ ಶಾಸಕ ಎಚ್ ಡಿ ರೇವಣ್ಣ ಅವರು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗಿದ್ದಾರೆ.
ಈ ಒಂದು ಹಿನ್ನೆಲೆಯಲ್ಲಿ ಎಚ್ ಡಿ ರೇವಣ್ಣ ಅವರ ಅಭಿಮಾನಿಗಳು ಬೆಂಬಲಿಗರು ಹಾಗೂ ಕಾರ್ಯಕರ್ತರು ಸಂಭ್ರಮಾಚರಣೆ ಮಾಡುತ್ತಿದ್ದು, ರೇವಣ್ಣ ಅವರ ಕ್ಷೇತ್ರದ ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನಲ್ಲಿ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಪಟಾಕಿ ಸಿಡಿಸಿ ಸಂಭ್ರಮಿಸಿದರು.
ಅಲ್ಲದೆ ಹಾಸನದಲ್ಲಿ ಎಚ್ ಡಿ ರೇವಣ್ಣ ಸ್ವಾಗತಕ್ಕೆ ಭರ್ಜರಿ ಸಿದ್ಧತೆ ನಡೆಸುತ್ತಿದ್ದು, ರೇವಣ್ಣ ನಾಳೆ ಹೊಳೆನರಸೀಪುರಕ್ಕೆ ಹೋಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ ಹಾಸನಕ್ಕೆ ಬರುವ ವೇಳೆ ಗಡಿಯಲ್ಲಿಯೇ HD ರೇವಣ್ಣ ಸ್ವಾಗತಕ್ಕೆ ಕಾರ್ಯಕರ್ತರು ಸಿದ್ಧತೆ ಮಾಡಿಕೊಂಡಿದ್ದಾರೆ.ರೇವಣ್ಣ ಬಂಧನದಿಂದ ಕಾರ್ಯಕರ್ತರು ಮಂಕಾಗಿದ್ದರು.ಇದೀಗ ರೇವಣ್ಣ ಅವರ ಬಿಡುಗಡೆಯ ಹಿನ್ನೆಲೆಯಲ್ಲಿ ಕಾರ್ಯಕರ್ತರಲ್ಲಿ ಉತ್ಸಾಹ ಹೆಚ್ಚಿದೆ.