ಹಾಸನ: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮಾಜಿ ಶಾಸಕ ಪ್ರೀತಂ ಗೌಡ ಆಪ್ತರಾದ ಚೇತನ್ ಹಾಗೂ ಲಿಖಿತ್ ಗೌಡ ಪರ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ನ್ಯಾಯಾಲಯ ವಜಾ ಮಾಡಿದೆ.ಹಾಸನದ ಒಂದನೇ ಅಧಿಕ ಹಿರಿಯ ಸಿವಿಲ್ ನ್ಯಾಯಾಲಯ (Court) ಜಾಮೀನು ಅರ್ಜಿ ವಜಾಗೊಳಿಸಿ ಆದೇಶ ನೀಡಿದೆ.
ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪೆನ್‌ಡ್ರೈವ್ ಇಟ್ಟುಕೊಂಡಿದ್ದ ಆರೋಪದ ಮೇರೆಗೆ ವಿಶೇಷ ತನಿಖಾ ದಳ (SIT) ಮೇ 12ರಂದು ಹಾಸನದ ಮಾಜಿ ಶಾಸಕ ಪ್ರೀತಂ ಗೌಡ ಆಪ್ತರಾದ ಚೇತನ್ ಹಾಗೂ ಲಿಖಿತ್ ಗೌಡನನ್ನು ವಶಕ್ಕೆ ಪಡೆದುಕೊಂಡಿದ್ದು, ಈ ಇಬ್ಬರು ನ್ಯಾಯಾಂಗ ಬಂಧನದಲ್ಲಿದ್ದಾರೆ. ತಮ್ಮ ಬಂಧನವನ್ನು ಪ್ರಶ್ನಿಸಿ ಇಬ್ಬರು ಕೂಡ ಜಾಮೀನು ಅರ್ಜಿಯನ್ನು ಸಲ್ಲಿಸಿದ್ದರು.