ಬೆಂಗಳೂರು : ಕಿಡ್ನಾಪ್ ಪ್ರಕರಣದಲ್ಲಿ ಜೆಡಿಎಸ್ ಶಾಸಕ ರೇವಣ್ಣ ಅವರಿಗೆ ಜಾಮೀನು ಮಂಜೂರು ಹಾಗೂ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೆ ಆಗಿರುವ ತನಿಖಾ ಬೆಳವಣಿಗೆ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಎಸ್‌ಐಟಿ ಪೊಲೀಸರೊಂದಿಗೆ ಸಭೆ ನಡೆಸಿ ಮಾಹಿತಿ ಪಡೆದರು ಎಂದು ತಿಳಿದುಬಂದಿದೆ.
ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸಭೆಯಲ್ಲಿ ಎಸ್‌ಐಟಿ ಪೊಲೀಸರು ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದ ತನಿಖೆ ಯಾವ ಹಂತದಲ್ಲಿದೆ ಎಂಬ ಬಗ್ಗೆ ಮಾಹಿತಿ ನೀಡಿದರು. ಪ್ರಮುಖವಾಗಿ ರೇವಣ್ಣ ಅವರಿಗೆ ಜಾಮೀನು ಸಿಗಲು ಕಾರಣ, ಮಾಜಿ ಶಾಸಕ ಪ್ರೀತಂಗೌಡ ಆಪ್ತರ ಬಂಧನಸೇರಿದಂತೆಮತ್ತಿತರ ವಿಷಯಗಳನ್ನು ತಿಳಿಸಿದರು. ಈ ವೇಳೆ ಸಿಎಂ, ತನಿಖೆ ಯನ್ನು ಚುರುಕುಗೊಳಿಸು ವಂತೆ ತಿಳಿಸಿದರಲ್ಲದೆ, ಪಾರ ದರ್ಶಕವಾಗಿ ಮಾಡುವಂತೆ ಸೂಚನೆ ನೀಡಿದರುಎಂದು ಮೂಲಗಳು ತಿಳಿಸಿವೆ.
ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸಭೆಯಲ್ಲಿ ಡಿಸಿಎ೦ಡಿ.ಕೆ.ಶಿವಕುಮಾರ್, ಸಚಿವರಾದ ಡಾ. ಜಿ.ಪರಮೇಶ್ವರ್, ಚೆಲುವರಾಯಸ್ವಾಮಿ, ಬೈರತಿ ಸುರೇಶ್ ಸೇರಿದಂತೆ ಹಿರಿಯ ಅಧಿಕಾರಿಗಳು ಪಾಲ್ಗೊಂಡಿದ್ದರು. ಸಭೆ ಮುಗಿಸಿ ಸಿಎಂ ತೆರಳಿದ ನಂತರ ಡಿ.ಕೆ. ಶಿವಕುಮಾರ್ ಮತ್ತು ಡಾ. ಜಿ. ಪರಮೇಶ್ವರ್ ಪ್ರತ್ಯೇಕವಾಗಿ ಚರ್ಚಿಸಿ ದರು. ಈ ವೇಳೆಯಲ್ಲೂ ಪ್ರಜ್ವಲ್ ರೇವಣ್ಣ ಪ್ರಕರಣ, ರೇವಣ್ಣ ಜಾಮೀನು ಪಡೆದಿರುವ ಬಗ್ಗೆ ಮಾತುಕತೆ ನಡೆಸಿದರು ಎಂದು ಹೇಳಲಾಗಿದೆ.