ಬೆಂಗಳೂರು: ಕೆಇಎಯಿಂದ 1000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇಮಕಾತಿಗೆ ಅರ್ಜಿಯನ್ನು ಕರೆಯಲಾಗಿತ್ತು. ಈಗ ಉದ್ಯೋಗಾಕಾಂಕ್ಷಿಗಳಿಗೆ ಅರ್ಜಿ ಸಲ್ಲಿಸೋದಕ್ಕೆ ಮೇ.15ರ ಇಂದು ಕೊನೆಯ ದಿನವಾಗಿದೆ.
ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವತಿಯಿಂದ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಉಳಿಕೆ ಮೂಲ ವೃಂದ ಹಾಗೂ ಕಲ್ಯಾಣ ಕರ್ನಾಟಕ (ಸ್ಥಳೀಯ) ವೃಂದದಲ್ಲಿರುವ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇರ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇರ ನೇಮಕಾತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಸ್ಪರ್ಧಾತ್ಮಕ ಪರೀಕ್ಷೆಯನ್ನು ನಡೆಸಲಾಗುತ್ತದೆ. ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಅಭ್ಯರ್ಥಿಗಳು ಒಂದು ಜಿಲ್ಲೆಗೆ ಮಾತ್ರ ಅರ್ಜಿ ಸಲ್ಲಿಸಲು ಅರ್ಹರಿದ್ದು, ಪ್ರಾಧಿಕಾರವು ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗೆ ಹಾಜರಾಗಬೇಕು. ಎರಡನೇ ಪಿ.ಯು.ಸಿ ಅಥವಾ ತತ್ಸಮಾನ ಪದವಿ ಪಡೆದ ಅಭ್ಯರ್ಥಿಗಳು ಅರ್ಹರಾಗಿರುತ್ತಾರೆ.
ಒಟ್ಟು 1000 ಹುದ್ದೆಗಳಿಗೆ ನೇಮಕಾತಿ ನಡೆಯಲಿದ್ದು, ಅಭ್ಯರ್ಥಿಯು ಎರಡನೇ ಪಿಯುಸಿ ಅಥವಾ ತತ್ಸಮಾನತೆಯ ಶೈಕ್ಷಣಿಕ ವಿದ್ಯಾರ್ಹತೆಯನ್ನು ಪಡೆದಿರಬೇಕು.
ಆಯ್ಕೆಯಾದ ಅಭ್ಯರ್ಥಿಗಳಿಗೆ ವೇತನ 21,400-42,000 ನಿಗದಿಯಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಇಲಾಖೆಯ ಅಧಿಕೃತ ವೆಬ್‍ಸೈಟ್ https://kea.kar.nic.in ನಲ್ಲಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.
ದಿನಾಂಕ 05-04-2024ರ ಇಂದಿನಿಂದ ಗ್ರಾಮ ಆಡಳಿತಾಧಿಕಾರಿ ಹುದ್ದೆಗಳ ನೇಮಕಾತಿಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಕೆ ಪುನರಾರಂಭಗೊಂಡಿತ್ತು. . ದಿನಾಂಕ 04-05-2024 ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿತ್ತು. ದಿನಾಂಕ 07-05-2024 ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನವಾಗಿತ್ತು. ಆದ್ರೇ ಈ ದಿನಾಂಕವನ್ನು ವಿಸ್ತರಿಸಲಾಗಿದೆ. ಮೇ 15ರವರೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಶುಲ್ಕ ಪಾವತಿಗೆ ಮೇ 18ರವರೆಗೆ ಅವಕಾಶ ನೀಡಲಾಗಿದೆ.