ಹುಬ್ಬಳ್ಳಿ : ಇತ್ತೀಚಿಗೆ ಇಡೀ ರಾಜ್ಯವೇ ಬೆಚ್ಚಿ ಬೀಳಿಸುವಂತೆ ಹುಬ್ಬಳ್ಳಿಯ ಬಿವಿಬಿ ಕಾಲೇಜಿನಲ್ಲಿ ವಿದ್ಯಾರ್ಥಿ ನೇಹಾ ಹಿರೇಮಠ ಕೊಲೆ ಮಾಸುವ ಮುನ್ನವೇ ಇದೀಗ ಮತ್ತೊಂದು ಬೆಚ್ಚಿ ಬೀಳಿಸುವ ಘಟನೆ ನಡೆದಿದ್ದು, ಮಲಗಿದ್ದ ಯುವತಿಗೆ ಚಾಕು ಇರಿದು ಭೀಕರವಾಗಿ ಕೊಲೆ ಮಾಡಲಾಗಿದೆ.
ಹೌದು ಹುಬ್ಬಳ್ಳಿಯ ವೀರಾಪುರ ಓಣಿಯಲ್ಲಿ ಈ ಒಂದು ಘಟನೆ ನಡೆದಿದ್ದು, ಚಾಕುವಿನಿಂದ ಇರಿದು ಅಂಜಲಿ ಅಂಬಿಗರ ಎನ್ನುವ ಯುವತಿಯನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ರಾತ್ರಿ ಯುವತಿ ಮಲಗಿದ್ದಾಗ ದುಷ್ಕರ್ಮಿಗಳು ಚಾಕುವಿನಿಂದ ಇರಿದು ಕೊಲೆ ಮಾಡಿ ಪರಾರಿಯಾಗಿದ್ದಾರೆ. ಘಟನೆ ಕುರಿತಂತೆ ಬೆಂಡಿಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.ಘಟನೆ ಕುರಿತಂತೆ ಇದೀಗ ಪೊಲೀಸರು ತನಿಖೆ ಕೈಗೊಂಡಿದ್ದು ದುಷ್ಕರ್ಮಿಗಳ ಬಂಧನಕ್ಕೆ ಬೆಲೆ ಬೀಸಿದ್ದಾರೆ ಎನ್ನಲಾಗಿದೆ.