ಹುಬ್ಬಳ್ಳಿ : ವಿದ್ಯಾರ್ಥಿ ನೇಹಾ ಹಿರೇಮಠ ಹತ್ಯೆ ಬೆನ್ನಲ್ಲೇ ಹುಬ್ಬಳ್ಳಿಯಲ್ಲಿ ಮತ್ತೊಬ್ಬ ಯುವತಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ.
ಹುಬ್ಬಳ್ಳಿಯಲ್ಲಿ ಯುವತಿಯ ಬರ್ಬರ ಹತ್ಯೆ ನಡೆದಿದೆ. ಹತ್ಯೆಯಾದ ಯುವತಿಯನ್ನು ಅಂಜಲಿ ಅಂಬಿಗೇರ್ ಎಂದು ಗುರುತಿಸಲಾಗಿದ್ದು, ಮನೆಗೆ ನುಗ್ಗಿದ ದುಷ್ಕರ್ಮಿಗಳು ಚಾಕುವಿನಿಂದ ಇರಿದು ಹತ್ಯೆಗೈದು ಪರಾರಿಯಾಗಿದ್ದಾರೆ.
ಯುವತಿ ಮಲಗಿದ್ದ ವೇಳೆ ಚಾಕುವಿನಿಂದ ಇರಿದು ಹತ್ಯೆ ಮಾಡಲಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬೆಂಡಿಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.