ವಿಜಯಪುರ : ಉಷ್ಣ ವಿದ್ಯುತ್ ಸ್ಥಾವರದ ಚಿಮಣಿಯ ಮೇಲಿಂದ ಬಿದ್ದು ಉತ್ತರ ಪ್ರದೇಶದ ಮೂಲದ ಕಾರ್ಮಿಕ ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆಯ ಕೂಡಿಗೆ ಉಷ್ಣ ವಿದ್ಯುತ್ ಸ್ಥಾವರದಲ್ಲಿ ಈ ದುರ್ಘಟನೆ ಸಂಭವಿಸಿದೆ.
ಉತ್ತರ ಪ್ರದೇಶ ಮೂಲದ ಕಿಶನ್ ಕುಮಾರ್ ಭಾರಧ್ವಜ (32) ಎನ್ನುವ ಕಾರ್ಮಿಕ ಸಾವನ್ನಪ್ಪಿದ್ದಾನೆ. ಉಷ್ಣ ವಿದ್ಯುತ್ ಸ್ಥಾವರದ ಮೇಲಿಂದ ಬಿದ್ದಿರುವ ಪರಿಣಾಮ ಕಾರ್ಮಿಕನ ದೇಹ ಚಿದ್ರ ಚಿದ್ರವಾಗಿದೆ ಎಂದು ಹೇಳಲಾಗುತ್ತಿದೆ. ಕೇಬಲ್ ಅಳವಡಿಸುವಾಗ ಆಯತಪಿ ಬಿದ್ದು ದುರ್ಮರಣ ಉತ್ತರ ಪ್ರದೇಶದ ಗಾಜಿಪುರ ಮೂಲದ ಕಾರ್ಮಿಕ ಸಾವನ್ನಪ್ಪಿದ್ದಾನೆ.
ಇದೆ ವೇಳೆ ಕಾರ್ಮಿಕರಿಗೆ ಸೂಕ್ತ ರಕ್ಷಣೆ ಇಲ್ಲ ಎಂದು ಇತರೆ ಕಾರ್ಮಿಕರು ಪ್ರತಿಭಟಿಸುತ್ತಿದ್ದಾರೆ. NTPC ಎದುರು ಕಾರ್ಮಿಕರು ಪ್ರತಿಭಟನೆ ನಡೆಸಿದ್ದಾರೆ.ಮೃತನ ಕುಟುಂಬಕ್ಕೆ ಪರಿಹಾರ ನೀಡುವಂತೆ ಇದೀಗ ಒತ್ತಾಯ ಕೇಳಿ ಬಂದಿದೆ. ಕೂಡಗಿ NTPC ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.