ಬೆಂಗಳೂರು : ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಪ್ರಜ್ವಲ್ ರೇವಣ್ಣ ಇದೀಗ ವಿದೇಶದಲ್ಲಿದ್ದು ಅಂದುಕೊಂಡಂತೆ ಆಗಿದ್ದರೆ ಇಂದು ಬೆಂಗಳೂರಿಗೆ ಪ್ರಜ್ವಲ್ ಆಗಮಿಸಬೇಕಿತ್ತು, ಆದರೆ ನಾಲ್ಕು ದಿನಗಳ ಹಿಂದೆ ಟಿಕೆಟ್ ಬುಕ್ ಮಾಡಿದ್ದನ್ನು ಮತ್ತೆ ಕ್ಯಾನ್ಸಲ್ ಮಾಡಿದ್ದಾರೆ. ಜರ್ಮನಿಯಿಂದ ಬೆಂಗಳೂರಿಗೆ ಲೂಫ್ತಾನ್ಸ ಏರ್ಲೈನ್ಸ್ ಮೂಲಕ ಆಗಮಿಸಬೇಕಾಗಿತ್ತು. ಆದರೆ ಕಳೆದ ನಾಲ್ಕು ದಿನಗಳ ಹಿಂದೆ ಮೇ 15 ಅಂದರೆ ಇಂದು ಟಿಕೆಟ್ ಬುಕ್ ಮಾಡಿದ್ದನ್ನು ಕ್ಯಾನ್ಸಲ್ ಮಾಡಿದ್ದಾರೆ.
ಕಳೆದ 15 ದಿನಗಳ ಹಿಂದೆ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ವಿರುದ್ಧ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಹಾಗೂ ಅಶ್ಲೀಲ ವಿಡಿಯೋ ಪ್ರಕಾರಕ್ಕೆ ಸಂಬಂಧಿಸಿದಂತೆ ದೂರು ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಪ್ರಜ್ವಲ್ ವಿದೇಶದಲ್ಲೆ ಇದ್ದುಕೊಂಡು ಕಾನೂನು ಹೋರಾಟಕ್ಕೆ ಮುಂದಾಗಿದ್ದರು. ಈ ಕುರಿತಂತೆ ಎಸ್ಐಟಿ ಹಲವಾರು ಬಾರಿ ನೋಟಿಸ್ ನೀಡಿದರು ವಿಚಾರಣೆಗೆ ಅವರು ಹಾಜರಾಗಲಿಲ್ಲ.
ಈ ಹಿನ್ನೆಲೆಯಲ್ಲಿ ಎಸ್ಐಟಿ ತಂಡ ಸಿಐಡಿ ಮೂಲಕ ಪ್ರಜ್ವಲ್ ರೇವಣ್ಣ ಅವರಿಗೆ ಮೊದಲಿಗೆ ಬ್ಲೂ ಕಾರ್ನರ್ ನೋಟಿಸ್ ನೀಡಿತ್ತು. ಅದಕ್ಕೂ ಯಾವುದೇ ರೀತಿಯಾಗಿ ಸ್ಪಂದಿಸದೆ ಇರುವ ಕಾರಣ ನಂತರ ಇತ್ತೀಚಿಗೆ ರೆಡ್ ಕಾರ್ನರ್ ನೋಟಿಸ್ ಕೂಡ ನೀಡಲಾಯಿತು.ಈ ಮೂಲಕ ಇಂಟರ್ ಪೋಲ್ ಪ್ರಜ್ವಲ್ ರೇವಣ್ಣ ಅವರ ಚಲನ ವಲನ ಹಾಗೂ ಅವರು ಎಲ್ಲಿದ್ದಾರೆ ಏನು ಮಾಡುತ್ತಿದ್ದಾರೆ ಅವರ ಚಟುವಟಿಕೆಗಳ ಮೇಲೆ ನಿಗಾ ಇಡುವ ಒಂದು ನೋಟಿಸ್ ಆಗಿದೆ.
ಸದ್ಯ ಪ್ರಜ್ವಲ್ ಜರ್ಮನಿಯ ಮ್ಯುನಿಚ್ ಎಂಬ ನಗರದಲ್ಲಿ ವಾಸ್ತವ್ಯ ಹೂಡಿದ್ದು, ರಾಜ್ಯದಲ್ಲಿ ಎಸ್ಐಟಿ ಅವರು ಯಾವ ರೀತಿ ಕ್ರಮ ತೆಗೆದುಕೊಳ್ಳುತ್ತಾರೆ ಎಂಬುದರ ಮೇಲೆ ಅವರು ಭಾರತಕ್ಕೆ ವಾಪಸ್ಸಾಗುವ ಪ್ಲಾನ್ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಇದೀಗ ಅಷ್ಟಿಲ್ಲ ವಿಡಿಯೋ ಪೆನ್ ಡ್ರೈವ್ ಹಂಚಿಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೂಡ ಸೊಸೈಟಿ ಅಧಿಕಾರಿಗಳು ಬಿಜೆಪಿಯ ಮಾಜಿ ಶಾಸಕ ಪ್ರೀತಮ್ ಗೌಡ ಆಪ್ತರ ಇಬ್ಬರನ್ನು ಬಂಧಿಸಲಾಗಿದ್ದು ಅಲ್ಲದೆ ನಿನ್ನೆ ವಕೀಲ ದೇವರಾಜೇಗೌಡ ನಿವಾಸ ಸೇರಿ ಆರು ಕಡೆಗಳಲ್ಲಿ ಎಸ್ಐಟಿ ಅಧಿಕಾರಿಗಳು ಏನಾದರೂ ಸಾಕ್ಷಿ ಸಿಗಬಹುದೇನೋ ಎನ್ನುವ ಉದ್ದೇಶದಿಂದ ದಾಳಿ ಮಾಡಿ ಪರಿಶೀಲನೆ ನಡೆಸಿದೆ ಎಂದು ತಿಳಿದು ಬಂದಿದೆ.
ಅಲ್ಲದೆ ಇತ್ತೀಚಿಗೆ ಮಹಿಳೆ ಅಪಹರಣ ಪ್ರಕರಣದಲ್ಲಿ ಹೊಳೆನರಸೀಪುರ ಶಾಸಕ ಎಚ್ ಡಿ ರೇವಣ್ಣ ಅವರನ್ನು ಎಸ್ಐಟಿ ಅಧಿಕಾರಿಗಳು ಬಂಧಿಸಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸಿದರು.ಇದೀಗ ಕಳೆದ ಹತ್ತು ದಿನಗಳಿಂದ ಜೈಲುವಾಸ ಅನುಭವಿಸಿದ್ದ ರೇವಣ್ಣ ಅವರು ನಿನ್ನೆ ಶರತ್ತು ಬದ್ಧ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ.ಬಿಡುಗಡೆ ನಂತರ ಮೊದಲು ಬೆಂಗಳೂರಿನ ಪದ್ಮನಾಭನಗರದಲ್ಲಿರುವ ತಂದೆ HD ದೇವೇಗೌಡ ಹಾಗೂ ಕುಟುಂಬಸ್ಥರನ್ನು ಭೇಟಿಯಾಗಿದ್ದಾರೆ.
ನಂತರ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ತೆರಳಿ ಪ್ರಜ್ವಲ್ ಹಾಗೂ ಇಡೀ ಕುಟುಂಬದ ಸದಸ್ಯರ ಹೆಸರಲ್ಲಿ ಅರ್ಚನೆ ಮಾಡಿಸಿದ್ದಾರೆ. ಇಂದು ಕೂಡ ಅವರು ಹಲವು ದೇವಾಲಯಗಳಿಗೆ ಭೇಟಿ ನೀಡಬೇಕಿತ್ತು ಆದರೆ ಪ್ರಜ್ವಲ್ ಕಾನೂನು ಹೋರಾಟಕ್ಕೆ ಕುರಿತಂತೆ ತಜ್ಞರ ಸಲಹೆ ಪಡೆಯುವ ಸಲುವಾಗಿ ಅವರ ಪ್ರವಾಸವನ್ನು ರದ್ದುಗೊಳಿಸಿದ್ದಾರೆ ಎಂದು ತಿಳಿದುಬಂದಿದೆ.